ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಇಂದು ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಅಂದ ಹಾಗೇ ನಾಳೆ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನೇರವೇರಿಸಲಾಗುವುದು.
ಈ ನಡುವೆ . ಶ್ರೀನಿವಾಸ ಪ್ರಸಾದ್, ಸಂಸದರು ಹಾಗೂ ಮಾಜಿ ಸಚಿವರು ಇವರು ದಿನಾಂಕ:29.04.2024ರಂದು ನಿಧನರಾದ ವಿಷಯವನ್ನು ರಾಜ್ಯ ಸರ್ಕಾರವು ತೀವು ಸಂತಾಪದಿಂದ ಈ ಮೂಲಕ ಪ್ರಕಟಿಸಿದೆ.
ದಿವಂಗತರ ಗೌರವಾರ್ಥವಾಗಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಎಲ್ಲಾ ಸರ್ಕಾರಿ ಕಛೇರಿಗಳಿಗೂ ಹಾಗೂ ಎಲ್ಲಾ ಶಾಲಾ ಕಾಲೇಜುಗಳಿಗೂ (ಪೂರ್ವ ನಿಗಧಿಯಾಗಿರುವ ಪರೀಕ್ಷೆಗಳನ್ನು ಹೊರತುಪಡಿಸಿ), ಅನುದಾನ ಪಡೆಯುವ ಎಲ್ಲಾ ವಿದ್ಯಾ ಸಂಸ್ಥೆಗಳಿಗೂ ದಿನಾಂಕ:30.04.2024ರಂದು ರಜೆ ಘೋಷಿಸಲಾಗಿದೆ. ಸದರಿ ಆದೇಶವು ನಗೋಷಿಯಬಲ್ ಇನ್ಸ್‌ಸ್ಸುಮೆಂಟ್ ಆಕ್ಟ್ 1881ರ ಪಕಾರವು ಕೂಡ ಸಾರ್ವಜನಿಕ ರಜೆ ಎಂದು ಘೋಷಿಸಲಾಗಿದೆ. ಮೃತರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸುವಂತ ಆದೇಶಿಸಿದೆ.