ಬೆಂಗಳೂರು: ಅನಾರೋಗ್ಯದಿಂದಾಗಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧರಾಗಿದ್ದರು. ಅವರ ಪಾರ್ಥೀವ ಶರೀರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸುವಂತೆ ರಾಜ್ಯ ಸರ್ಕಾರದ ಆದೇಶಿಸಿದೆ.
ಈ ಕುರಿತು ರಾಜ್ಯ ಸರ್ಕಾರದ ರಾಜ್ಯ ಶಿಷ್ಠಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ವಿ. ಶ್ರೀನಿವಾಸ ಪುಸಾದ್, ಸಂಸದರು ಹಾಗೂ ಮಾಜಿ ಸಚಿವರು ಇವರು ದಿನಾಂಕ:29.04.2024ರಂದು ನಿಧನರಾದ ವಿಷಯವನ್ನು ರಾಜ್ಯ ಸರ್ಕಾರವು ತೀವು ಸಂತಾಪದಿಂದ ಈ ಮೂಲಕ ಪ್ರಕಟಿಸಿದೆ.
ದಿವಂಗತರ ಗೌರವಾರ್ಥವಾಗಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಎಲ್ಲಾ ಸರ್ಕಾರಿ ಕಛೇರಿಗಳಿಗೂ ಹಾಗೂ ಎಲ್ಲಾ ಶಾಲಾ ಕಾಲೇಜುಗಳಿಗೂ (ಪೂರ್ವ ನಿಗಧಿಯಾಗಿರುವ ಪರೀಕ್ಷೆಗಳನ್ನು ಹೊರತುಪಡಿಸಿ), ಅನುದಾನ ಪಡೆಯುವ ಎಲ್ಲಾ ವಿದ್ಯಾ ಸಂಸ್ಥೆಗಳಿಗೂ ದಿನಾಂಕ:30.04.2024ರಂದು ರಜೆ ಘೋಷಿಸಲಾಗಿದೆ.
ಸದರಿ ಆದೇಶವು ನಗೋಷಿಯಬಲ್ ಇನ್ಸ್ಸ್ಟ್ರುಮೆಂಟ್ ಆಕ್ಟ್ 1881ರ ಪಕಾರವು ಕೂಡ ಸಾರ್ವಜನಿಕ ರಜೆ ಎಂದು ಘೋಷಿಸಲಾಗಿದೆ. ಅಲ್ಲದೇ ಮೃತರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸುವಂತೆ ಆದೇಶಿಸಿದ್ದಾರೆ.
BREAKING : ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ : ಅಸ್ಸಾಂ ಪೊಲೀಸರಿಂದ ಮೊದಲ ಆರೋಪಿ ಬಂಧನ