ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಗೆ ಜನ, ಜಾನುವಾರು ತತ್ತರಿಸಿ ಹೋಗಿದ್ದಾರೆ. ಇದರ ನಡುವೆ ಮೇ.2ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸಲಿದೆ. ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಬಗ್ಗೆ ರಾಜ್ಯ ವಾರ್ತಾ ಇಲಾಖೆ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 2ರವರೆಗೆ ಬಿಸಿಗಾಳಿ ಬೀಸುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ ಎಂದು ತಿಳಿಸಿದೆ.
ರಾಜ್ಯದ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಅನ್ನು ಬಿಸಿಗಾಳಿ ಎಚ್ಚರಿಕೆಯನ್ನು ನೀಡಲಾಗಿದೆ.
ಇನ್ನೂ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲೂ ಉಷ್ಣಾಂಶ ಗರಿಷ್ಠ ಮಟ್ಟ ತಲುಪಲಿದೆ ಬಿಸಿ ವಾತಾವರಣದ ಮುನ್ಸೂಚನೆಯನ್ನು ನೀಡಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 2ರವರೆಗೆ ಬಿಸಿಗಾಳಿ ಬೀಸುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಬಿಸಿಗಾಳಿ ಎಚ್ಚರಿಕೆಯನ್ನು… pic.twitter.com/geTx9JuFFd
— DIPR Karnataka (@KarnatakaVarthe) April 29, 2024
ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಬಿಜೆಪಿ ನಿಲುವೇನು ಎಂದು ಸ್ಪಷ್ಟಪಡಿಸಲಿ: AAP ದಿಲೀಪ್ ಪಾಂಡೆ ಒತ್ತಾಯ
BREAKING : ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ : ಅಸ್ಸಾಂ ಪೊಲೀಸರಿಂದ ಮೊದಲ ಆರೋಪಿ ಬಂಧನ