ಮೈಸೂರು : ದಿವಂಗತ ಶ್ರೀನಿವಾಸ ಪ್ರಸಾದ್ರವರ ನಿಧನಕ್ಕೆ ಗೌರವ ಸೂಚಕವಾಗಿ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಅಂತ್ಯಕ್ರಿಯೆ ನಡೆಯಲಿದೆ.
ಇಂದು ಮಧ್ಯಾಹ್ನದ ಬಳಿಕ ಮೈಸೂರಿನಲ್ಲೇ ಬೌದ್ಧಧರ್ಮದ ವಿಧಿವಿಧಾನದಂತೆ ಶ್ರೀನಿವಾಸ ಪ್ರಸಾದ್ ಅಂತ್ಯಕ್ರಿಯೆ ನಡೆಯಲಿದೆ ಎಂದು ಬೋಧಿದತ್ತ ಮಾಹಿತಿ ನೀಡಲಾಗಿದೆ.
ರಾಜ್ಯ ಹಾಗೂ ಹೊರರಾಜ್ಯಗಳ ಬೌದ್ಧಭಿಕ್ಕುಗಳಿಂದ ಅಂತಿಮ ವಿಧಿವಿಧಾನ ಕಾರ್ಯಗಳು ನಡೆಯಲಿದ್ದು, ಎಂಟು ಬೌದ್ಧಭಿಕ್ಕುಗಳಿಂದ ಪಂಚಶೀಲತತ್ವ ಬೋಧನೆ, ತ್ರಿಸರಣ ಮೂಲಕ ಅಂತ್ಯಕ್ರಿಯೆ ನಡೆಯಲಿದೆ. ಬೌದ್ಧಧರ್ಮದ ಅನುಯಾಯಿ ಆಗಿದ್ದರಿಂದ ಅಹಿಂಸೆ, ಸತ್ಯದ ಸಂದೇಶದ ಮೂಲಕ ವಿಧಿವಿಧಾನ ನೆರವೇರಿಸಲಾಗುತ್ತೆ.
ವಿ.ಶ್ರೀನಿವಾಸ ಪ್ರಸಾದ್ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ 76 ವರ್ಷದ ಶ್ರೀನಿವಾಸ್ ಪ್ರಸಾದ್ರನ್ನ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧ್ಯರಾತ್ರಿ 1.20ರ ಸುಮಾರಿಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.