ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿಲ್ಲ ಎಂದು ಮೂಲಗಳು ತಿಳಿಸಿವೆ.
ವರದಿಗಳ ಪ್ರಕಾರ, ಪ್ರಿಯಾಂಕಾ ಗಾಂಧಿ ಅವರು ಕೇವಲ ಒಂದು ಸ್ಥಾನದಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ಬದಲು ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಿದರೆ ಅದು ಪಕ್ಷಕ್ಕೆ ಹೆಚ್ಚು ಪರಿಣಾಮಕಾರಿ ಎಂದು ಅಭಿಪ್ರಾಯಪಟ್ಟಿದ್ದಾರೆ ಎನ್ನಲಾಗಿದೆ.