ನವದೆಹಲಿ: ಮೀಸಲಾತಿಯನ್ನು ತೆಗೆದುಹಾಕುವುದಾಗಿ ಹೇಳುವ ನಕಲಿ ವೀಡಿಯೊ ವೈರಲ್ ಆದ ನಂತರ ಗೃಹ ಸಚಿವ ಅಮಿತ್ ಶಾ ಇಂದು ಕಾಂಗ್ರೆಸ್ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ . ಗೃಹ ಸಚಿವರ ನಕಲಿ ವೀಡಿಯೊವನ್ನು ತಯಾರಿಸಿ ಹಂಚಿಕೊಂಡ ಆರೋಪದ ಮೇಲೆ ಅಸ್ಸಾಂನ ಗುವಾಹಟಿಯ ಕಾಂಗ್ರೆಸ್ ಕಾರ್ಯಕರ್ತ ರೀತಮ್ ಸಿಂಗ್ ಅವರನ್ನು ನಿನ್ನೆ ಬಂಧಿಸಲಾಗಿದೆ.
ಈ ನಡುವೆ ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ಬಿಜೆಪಿ ತೆಗೆದುಹಾಕುವುದಿಲ್ಲ ಮತ್ತು ಹಾಗೆ ಮಾಡಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಶಾ ಹೇಳಿದ್ದರೆ. ಎಸ್ಟಿ, ಎಸ್ಸಿ ಮತ್ತು ಒಬಿಸಿಗಳ ಕೋಟಾಗಳನ್ನು ರದ್ದುಗೊಳಿಸಲು ಸಂಸತ್ತಿನಲ್ಲಿ ಸಂಖ್ಯಾಬಲವನ್ನು ಹೊಂದಲು ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಬಿಜೆಪಿ ಹೊಂದಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.