ಹುಬ್ಬಳ್ಳಿ: ಹಾಸನ ಸಂಸದ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರನ್ನು ಲೈಂಗಿಕ ಕಿರುಕುಳ ಆರೋಪದ ಮೇಲೆ ಅಮಾನತುಗೊಳಿಸಲು ಜೆಡಿಎಸ್ ನಿರ್ಧರಿಸಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಹಾಗೂ ಕ್ರಿಮಿನಲ್ ಬೆದರಿಕೆ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದರು.
“ಈಗಾಗಲೇ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೋರ್ ಕಮಿಟಿ ಸಭೆಯಲ್ಲಿ ಇದನ್ನು ಶಿಫಾರಸು ಮಾಡಲಾಗುವುದು. ಅವರು (ಪ್ರಜ್ವಲ್) ಸಂಸತ್ ಸದಸ್ಯರಾಗಿರುವುದರಿಂದ, ಅದನ್ನು ದೆಹಲಿಯಿಂದ ಮಾಡಬೇಕಾಗಿದೆ. ಆದ್ದರಿಂದ ನಾನು ದೇವೇಗೌಡರಿಗೆ (ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಮತ್ತು ಮಾಜಿ ಪ್ರಧಾನಿ) ಮನವಿ ಮಾಡಿದ್ದೆ. ಈ ವಿಷಯ ನನಗಾಗಲೀ, ದೇವೇಗೌಡರಿಗಾಗಲೀ ತಿಳಿದಿರಲಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.