ಬೆಂಗಳೂರು : ಪೆನ್ ಡ್ರೈವ್ ಹಿಂದೆ ಮಹಾನಾಯಕ ಕೈವಾಡ ಇದೆ ಎಂಬ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ ಕುಮಾರಸ್ವಾಮಿ ಅವರು ನನ್ನನ್ನು ನೆನಪಿಸಿಕೊಂಡಿಲ್ಲ ಅಂದ್ರೆ ನಿದ್ದೆ ಬರಲ್ಲ. ಪಾಪ ಅವರು ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ಸಂಪೂರ್ಣವಾಗಿ ಸಹಕಾರ ನೀಡುತ್ತಿದ್ದಾರೆ. ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಪ್ರಕರಣವನ್ನು ಎಸ್ ಐಟಿ ತನಿಖೆ ನಡೆಸುತ್ತಿದ್ದೆ. ಕಾನೂನು ಪ್ರಕಾರ ಏನು ಆಗಬೇಕು. ಅದು ಆಗುತ್ತದೆ ಎಂದು ಹೇಳಿದ್ದಾರೆ.
ಪೆನ್ ಡ್ರೈವ್ ಹಂಚಿಕೆ ಹಿಂದೆ ಕಾಂಗ್ರೆಸ್ ನ ಮಹಾನಾಯಕ, ಉಪಮುಖ್ಯಮಂತ್ರಿ ಕೈವಾಡವಿದೆ. ಪೆನ್ ಡ್ರೈವ್ ಹಂಚಿಕೆ ಮಾಡಿರುವುದು ಯಾರು ಅಂತ ಹೇಳಲಿ, ಪೆನ್ ಡ್ರೈವ್ ವಿಷಯ ಎಷ್ಟು ತಿಂಗಳ ಹಿಂದೆ ವಿಷ್ಯ ಗೊತ್ತಿತ್ತು? ಕಾಂಗ್ರೆಸ್ ಮಹಾನ್ ನಾಯಕ ದೊಡ್ಡ ಅಪರಾಧ ಮಾಡಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.