ಹುಬ್ಬಳ್ಳಿ: ಜಿಲ್ಲೆಯಲ್ಲಿ ನಡೆದಿದ್ದಂತ ನೇಹಾ ಹಿರೇಮಠ ಹತ್ಯೆ ಪ್ರಕರಣ ಸಂಬಂಧ ಆರೋಪಿ ಫಯಜ್ ನನ್ನು ಪೊಲೀಸರು ಬಂಧಿಸಿದ್ದರು. ಈ ಆರೋಪಿಯನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.
ಹುಬ್ಬಳ್ಳಿಯ ಕಾರ್ಪೊರೇಟರ್ ಪುತ್ರಿಯಾಗಿದ್ದಂತ ನೇಹಾ ಹಿರೇಮಠನನ್ನು ಕಾಲೇಜಿನ ಆವರಣದಲ್ಲೇ ಆರೋಪಿ ಫಯಜ್ ಚಾಕುವಿನಿಂದ ಇರಿದು 14 ಬಾರಿ ಹತ್ಯೆಗೈದಿದ್ದನು. ಈ ಪ್ರಕರಣ ಇಡೀ ರಾಜ್ಯ, ದೇಶದ ಜನತೆಯನ್ನೇ ಬೆಚ್ಚಿ ಬೀಳಿಸುವಂತೆ ಮಾಡಿತ್ತು.
ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಆದೇಶಿಸಿದೆ. ಅಲ್ಲದೇ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆಗೂ ಸೂಚಿಸಲಾಗಿದೆ. ಈ ಬೆನ್ನಲ್ಲೇ ಆರೋಪಿ ಫಯಜ್ ನನ್ನು ಹುಬ್ಬಳ್ಳಿಯ 1ನೇ ಜೆಎಂಎಫ್ ಸಿ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.
ಅಂದಹಾಗೇ ಆರೋಪಿ ಫಯಜ್ ನನ್ನು ಬಂಧನದ ಬಳಿಕ ಹೆಚ್ಚಿನ ವಿಚಾರಣೆಗಾಗಿ ಸಿಐಡಿ ವಶಕ್ಕೆ ಪಡೆದಿತ್ತು. 6 ದಿನಗಳ ಕಾಲ ವಶಕ್ಕೆ ಪಡೆದಿದ್ದಂತ ಸಿಐಡಿಯ ಕಾಲಾವಧಿ, ಇಂದು ಅಂತ್ಯಗೊಂಡಿತ್ತು. ಆರೋಪಿ ಫಯಜ್ ನನ್ನು ನ್ಯಾಯಾಲಯದ ಮುಂದೆ ಇಂದು ಹಾಜರುಪಡಿಸಲಾಗಿತ್ತು. ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಹೀಗಾಗಿ ಆರೋಪಿಯನ್ನು ಧಾರವಾಡದ ಸೆಂಟ್ರಲ್ ಜೈಲಿಗೆ ಕರೆದೊಯ್ಯೋ ಸಾಧ್ಯತೆ ಇದೆ.
ಪ್ರಜ್ವಲ್ ಪ್ರಕರಣ; ಪ್ರಧಾನಿ ಮೋದಿ, ದೇವೇಗೌಡರ ಕುಟುಂಬವೇ ನೇರ ಹೊಣೆ: ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ