ಹಾವೇರಿ: ಮಾಜಿ ಮುಖ್ಯಮಂತ್ರಿ ಬಸವರಾಜ ವಿರುದ್ಧ ಲೋಕಸಭಾ ಚುನಾವಣಾ ನೀತಿ ಸಂಹಿತೆ ಉಲ್ಘನೆ ಆರೋಪದಲ್ಲಿ ಎಫ್ ಐ ಆರ್ ದಾಖಲಾಗಿದೆ.
ಅನುಮತಿ ಇಲ್ಲದೇ ನಗರದ ವಿದ್ಯಾಸಂಸ್ಥೆಯಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಿರುವ ಆರೋಪದ ಮೇರೆಗೆ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ವಿರುದ್ಧ ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ.
ಏ.27ರಂದು ಬೊಮ್ಮಾಯಿ ಅವರು ನಗರದ ಆಯುರ್ವೇದ ಕಾಲೇಜಿನಲ್ಲಿ ಪ್ರಚಾರ ಸಭೆ ನಡೆಸಿದ್ದರು. ನೀತಿಸಂಹಿತೆ ಜಾರಿ ಇರುವ ಸಂದರ್ಭದಲ್ಲಿ ಪೂರ್ವಾನುಮತಿ ಇಲ್ಲದೇ ಹಾಗೂ ನೀತಿಸಂಹಿತೆ ಅನ್ವಯ ನಿಷೇಧಿತ ಪ್ರದೇಶವಾದ ವಿದ್ಯಾಸಂಸ್ಥೆಯಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಿದ್ದಾರೆ.
ಇದಲ್ಲದೇ ಫೇಸ್‌ಬುಕ್‌ನಲ್ಲಿ ಸಭೆಯ ಫೋಟೊ ಹಂಚಿಕೊಳ್ಳುವ ಮೂಲಕ ನೀತಿಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಕ್ಷಿಪ್ರ ಕಾರ್ಯಪಡೆ ಮುಖ್ಯಸ್ಥ ರಾಮಕೃಷ್ಣ ದೂರು ದಾಖಲಿಸಿದ್ದಾರೆ. ಈ ಮೂಲಕ ಮಾಜಿ ಸಿಎಂ ಬೊಮ್ಮಾಯಿಗೆ ಶಾಕ್ ನೀಡಲಾಗಿದೆ.