ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಅವರ ತಂದೆ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರಿಗೆ ವಿಶೇಷ ತನಿಖಾ ತಂಡ (ಎಸ್ಐಟಿ) ಸಮನ್ಸ್ ಜಾರಿ ಮಾಡಿದೆ.
ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳ ತನಿಖೆಗಾಗಿ ಕಾಂಗ್ರೆಸ್ ಎಸ್ಐಟಿ ರಚಿಸಿದ ನಂತರ ಜೆಡಿಎಸ್ ಅವರನ್ನು ಅಮಾನತುಗೊಳಿಸಿದ ಒಂದು ದಿನದ ನಂತರ ತಂದೆ-ಮಗನ ವಿರುದ್ಧ ಸಮನ್ಸ್ ಜಾರಿ ಮಾಡಲಾಗಿದೆ ಎನ್ನಲಾಗಿದೆ. ಆದರೆ ಪ್ರಜ್ವಲ ರೇವಣ್ಣ ಜರ್ಮನಿಗೆ ತೆರಳಿರುವುದರಿಂದ ಇಂದು ವಿಚಾರಣೆಗೆ ಹಾಜರಾಗಲ್ಲ ಎನ್ನಲಾಗುತಿದೆ.
ಜರ್ಮನಿಯಲ್ಲಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಈ ಹಿನ್ನೆಲೆಯಲ್ಲಿ ಅವರು ಕಾನೂನು ಮೊರೆ ಹೋಗಲಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ವಿಚಾರಣೆಗೆ ಹಾಜರಾಗಲು ವಕೀಲರ ಮೂಲಕ ಕಾಲಾವಕಾಶ ಕೇಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಜರ್ಮನಿಯಲ್ಲಿರುವ ಕಾರಣ ಇಂದು ಅವರಿಗೆ ಬರಲು ಸಾಧ್ಯವಾಗುವುದಿಲ್ಲ ಹಾಗಾಗಿ ಅವರ ವಕೀಲರ ಮೂಲಕ ಕಾಲಾವಕಾಶ ಕೇಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಮನೆ ಕೆಲಸದವರು ನೀಡಿದ ದೂರಿನ ಮೇರೆಗೆ ಪ್ರಜ್ವಲ್ ಮತ್ತು ಅವರ ತಂದೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ದೂರಿನ ನಂತರ, ತಂದೆ-ಮಗನ ವಿರುದ್ಧ ಲೈಂಗಿಕ ಕಿರುಕುಳ, ಹಿಂಬಾಲಿಸುವುದು, ಬೆದರಿಕೆ ಮತ್ತು ಮಹಿಳೆಯ ಘನತೆಗೆ ಧಕ್ಕೆ ತಂದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧದ ಎಫ್ಐಆರ್ ದಾಖಲಾಗಿದೆ.