ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ತಾವು ಬದುಕಿರುವವರೆಗೂ ಧರ್ಮದ ಆಧಾರದ ಮೇಲೆ ಮುಸ್ಲಿಮರಿಗೆ ಮೀಸಲಾತಿ ನೀಡಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. ತೆಲಂಗಾಣದ ಮೇಡಕ್ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಸಂವಿಧಾನದ 75 ನೇ ವರ್ಷಾಚರಣೆಯನ್ನು ಮೂರನೇ ಅವಧಿಗೆ (ಕೇಂದ್ರದಲ್ಲಿ) ದೊಡ್ಡ ರೀತಿಯಲ್ಲಿ ಆಚರಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
ನಾನು ಬದುಕಿರುವವರೆಗೂ ದಲಿತರು, ಬುಡಕಟ್ಟು ಜನಾಂಗದವರು ಮತ್ತು ಒಬಿಸಿಗಳಿಗಾಗಿ ಕೆಲಸ ಮಾಡುತ್ತೇನೆ. ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ, ಡಬಲ್ ಆರ್ (ಆರ್ಆರ್) ತೆರಿಗೆ ಮೂಲಕ ಸಂಗ್ರಹಿಸಲಾಗುತ್ತಿರುವ ಹಣವನ್ನು ದೆಹಲಿಗೆ ಕಳುಹಿಸಲಾಗುತ್ತಿದೆ ಎಂದು ಆರೋಪಿಸಿದರು. ಚ