ಬೆಂಗಳೂರು : ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡಿಲ್ಲವೆಂದು ಅಸಮಾಧಾನಗೊಂಡಿದ್ದ ಹಾವೇರಿಯ ಬಿಜೆಪಿಯ ಮಾಜಿ ಶಾಸಕ ನೆಹರು ಓಲೆಕಾರ್ ಅವರು ಇದೀಗ ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ಹಾವೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ಓಲೆಕಾರ್ ಬಿಜೆಪಿಗೆ ಗುಡ್ ಬಾಯ್ ಹೇಳಿದ್ದು, ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗಲಿದ್ದಾರೆ. ನೆಹರು ಓಲೆಕಾರ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ನೆಹರು ಓಲೆಕಾರ್ ಅವರು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಆಪ್ತನಾಗಿ ಗುರುತಿಸಿಕೊಂಡಿದ್ದರು. ಅಲ್ಲದೆ ವಿಧಾನಸಭಾ ಚುನಾವಣೆಯಲ್ಲಿ ಮುನಿಸಿಕೊಂಡಿದ್ದರು ಎನ್ನಲಾಗಿದೆ. ಹೀಗಾಗಿ ಇದೀಗ ಅವರು ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ.