ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅವರ ಪರವಾಗಿ ಅರುಣ್ ಎಸ್ಐಟಿಗೆ ಮನವಿ ಮಾಡಿಕೊಂಡಿದ್ದು 7 ದಿನಗಳ ಕಾಲ ಕಾಲಾವಕಾಶ ನೀಡಿ ಎಂದು ಪ್ರಜ್ವಲ್ ರೇವಣ್ಣ ಪರ ವಕೀಲ ಜಿ ಅರುಣ್ ಅವರು ಎಸ್ಐಟಿಗೆ ಕೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತಂತೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಹೊಳೆನರಸೀಪುರದ ಮನೆ ಬಾಗಿಲಿಗೆ ನಿನ್ನೆ ರಾತ್ರಿ ಎಸ್ಐಟಿ ಅಧಿಕಾರಿಗಳು ನೋಟಿಸ್ ಅಂಟಿಸಿದ್ದಾರೆ. ಪ್ರಜ್ವಲ್ ವಿದೇಶದಲ್ಲಿರುವುದರಿಂದ ಕಾಲಾವಕಾಶವನ್ನು ಕೇಳಿದ್ದಾರೆ. ಪ್ರಜ್ವಲ್ ಪರವಾಗಿ ನಾನು ಎಸ್ ಐ ಟಿ ಗೆ ಕಾಲಾವಕಾಶ ಕೇಳಿದ್ದೇನೆ. ಏಳು ದಿನ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದ್ದೇನೆ ಎಂದರು.
ಅಲ್ಲದೆ ಪ್ರಕರಣದ ನಂತರ ಮೊದಲ ಬಾರಿಗೆ ಸಂಸದ ಪ್ರಜ್ವಲ್ ರೇವಣ್ಣ ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದು, ವಕೀಲರ ಮೂಲಕ ಏಳು ದಿನ ಕಾಲಾವಕಾಶವನ್ನು ಕೇಳಿದ್ದಾರೆ. ಕಾಲಾವಕಾಶ ಕೇಳಿದ ಬಗ್ಗೆ ಜಾಲತಾಣದಲ್ಲಿ ಪ್ರಜ್ವಲ್ ರೇವಣ್ಣ ಪೋಸ್ಟ್ ಮಾಡಿದ್ದಾರೆ ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲ. ಬೆಂಗಳೂರಿನಲ್ಲಿ ಇಲ್ಲದ ಕಾರಣ ಸಿಐಡಿ ಗೆ ಮನವಿ ಮಾಡಿದ್ದೇನೆ ನನ್ನ ವಕೀಲರ ಮೂಲಕ ಸಿಐಡಿ ಗೆ ನಾನು ಮನವಿ ಮಾಡಿದ್ದೇನೆ ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪ್ರಜ್ವಲ್ ರೇವಣ್ಣ ಪೋಸ್ಟ್ ಮಾಡಿದ್ದಾರೆ.
ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ.
ಸತ್ಯ ಆದಷ್ಟು ಬೇಗ ಹೊರಬರಲಿದೆ.
As I am not in Bangalore to attend the enquiry, I have communicated to C.I.D Bangalore through my Advocate. Truth will prevail soon. pic.twitter.com/lyU7YUoJem
— Prajwal Revanna (@iPrajwalRevanna) May 1, 2024