ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಸಿದ್ಧರಾಮಯ್ಯ ಕೆಳಗೆ ಇಳಿದ 24 ಗಂಟೆಯಲ್ಲೇ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕಸ್ಟಡಿಗೆ ತೆಗೆದುಕೊಳ್ತೀವಿ ಅಂತ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತಿಗೆ ಮೂರು ಕಾಸಿನ ಬೆಲೆ ಇಲ್ಲ. ಭಯೋತ್ಪಾದನಾ ಚಟುವಟಿಕೆಗೆ ಅವರು ಹೇಳಿದ ಮಾತೆಲ್ಲ ಸುಳ್ಳಾಯಿತು. ಅವರು ಗೃಹಸಚಿವ ಅಮಿತ್ ಶಾ ಬಗ್ಗೆ ಹೇಳಿದ ಮಾತಿಗೆ ಬೆಲೆ ಕೊಡಬೇಕಾಗಿಲ್ಲ. 28 ಸ್ಥಾನದಲ್ಲಿ ಕೆಲವು ಸ್ಥಾನಗಳನ್ನು ಜೆಡಿಎಸ್‌ಗೆ ಬಿಟ್ಟಿದ್ದು, ಅಲ್ಲಿ ಯಾರು ಸ್ಪರ್ಧಿಸಬೇಕೆಂದು ಜೆಡಿಎಸ್ ತೀರ್ಮಾನಿಸುತ್ತದೆ. ಪ್ರಜ್ವಲ್ ರೇವಣ್ಣ ನಮ್ಮ ಸಂಸದರಲ್ಲ. ಇವರೇ ಜೋಡೆತ್ತು ಎಂದು ಅವರ ಜೊತೆಗೆ ಇದ್ದು ಮೊದಲಿಗೆ ಗೆಲ್ಲಿಸಿದ್ದರು. ಇದಕ್ಕೆ ಕಾಂಗ್ರೆಸ್ಸೇ ಉತ್ತರ ನೀಡಬೇಕು. ಪ್ರಜ್ವಲ್ ವಿದೇಶಕ್ಕೆ ಹೋಗುವಾಗ ಕರ್ನಾಟಕ ಪೊಲೀಸರು ಏನು ಮಾಡುತ್ತಿದ್ದರು? ಜಿಲ್ಲಾಧಿಕಾರಿ ಏನು ಮಾಡುತ್ತಿದ್ದರು? ಕಾಂಗ್ರೆಸ್ ಸರ್ಕಾರ ಗುಪ್ತಚರ ದಳ ವಿಫಲವಾಗಿದೆ ಎಂದು ಒಪ್ಪಿಕೊಳ್ಳಲಿ ಎಂದರು.
ಈ ದೇಶದ ಕಾನೂನಿಗೆ, ಸಂವಿಧಾನಕ್ಕೆ ಬಿಜೆಪಿ ಗೌರವ ನೀಡುತ್ತದೆ. ಯಾವುದೇ ಕಾರಣಕ್ಕೂ ಇಂತಹ ಘಟನೆಗೆ ಪಕ್ಷ ಬೆಂಬಲ ನೀಡುವುದಿಲ್ಲ. ಬಿಜೆಪಿಯಿಂದ ಕಠಿಣ ಕ್ರಮ ವಹಿಸಲಾಗುತ್ತದೆ. ಸಿದ್ದರಾಮಯ್ಯನವರು ಅಧಿಕಾರ ಬಿಟ್ಟು ಇಳಿದು ಬಿಜೆಪಿಗೆ ಅಧಿಕಾರ ನೀಡಿದರೆ 24 ಗಂಟೆಯಲ್ಲಿ ಪ್ರಜ್ವಲ್ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಅಥವಾ ಪೊಲೀಸ್ ಇಲಾಖೆಯ ಮೇಲೆ ಹಿಡಿತ ಇಲ್ಲ ಎಂದು ಕಾಂಗ್ರೆಸ್ ಸರ್ಕಾರ ಒಪ್ಪಿಕೊಳ್ಳಲಿ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯನ್ನು ಏಕೆ ಪ್ರಶ್ನೆ ಮಾಡಬೇಕು, ರಾಜ್ಯದ ಕಾನೂನು ಪಾಲನೆ ಕೇಂದ್ರ ಸರ್ಕಾರ ಮಾಡಬೇಕೆ ಎಂದು ಪ್ರಶ್ನಿಸಿದರು.
ಟಾಸ್ಕ್ ಫೋರ್ಸ್ ರಚಿಸಿ
ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಕೂಡಲೇ ಟಾಸ್ಕ್ ಫೋರ್ಸ್ ರಚಿಸಿ ಪ್ರತಿ ತಾಲೂಕಿಗೆ 5 ಕೋಟಿ ರೂ. ಮೀಸಲಿಡಬೇಕು ಎಂದು ಆರ್.ಅಶೋಕ ಆಗ್ರಹಿಸಿದರು.
ಇಂದಿನಿಂದ ಮೇ.5ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ‘ತೀವ್ರ ಬಿಸಿಗಾಳಿ’: ಹವಾಮಾನ ಇಲಾಖೆಯಿಂದ ‘ರೆಡ್ ಅಲರ್ಟ್’ ಘೋಷಣೆ
BIG NEWS: ನಮಗೆ ತೊಂದ್ರೆ ಕೊಟ್ರೆ ‘ಸೂಸೈಡ್’ ಮಾಡಿಕೊಳ್ತೀವಿ: SIT ಮುಂದೆ ಹೇಳಿಕೆಗೆ ‘ಸಂತ್ರಸ್ತೆ’ಯರು ಹಿಂದೇಟು