ಬೆಂಗಳೂರು : ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ವಿಚಾರ ಸಂಬಂಧ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೌಗೌಡ ನಿವಾಸದಲ್ಲಿ ಮಹತ್ವದ ಸಭೆ ನಡೆಸಿದ್ದಾರೆ.
ಬುಧವಾರ ಬೆಂಗಳೂರಿನ ಪದ್ಮನಾಭನಗರ ನಿವಾಸದಲ್ಲಿ ನಡೆದ ಸಭೆಯಲ್ಲಿ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವ ಹೆಚ್.ಡಿ. ರೇವಣ್ಣ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಅವರು ಭಾಗಿಯಾಗಿದ್ದರು.
ಪ್ರಜ್ವಲ್ ಪ್ರಕರಣವನ್ನು ಈಗಾಗಲೇ ರಾಜ್ಯ ಸರ್ಕಾರ ಎಎಸ್ ಐಟಿ ರಚನೆ ಮಾಡಿದ್ದು, ಒಂದು ವೇಳೆ ಪ್ರಜ್ವಲ್ ರನ್ನು ಬಂಧಿಸಿದರೆ ಮುಂದಿನ ಕ್ರಮಗಳ ಕುರಿತು ಸಮಾಲೋಚನೆ ನಡೆಸಲಾಗಿದೆ ಎಂದು ಹೇಳಲಾಗಿದೆ.