ಬೆಂಗಳೂರು : ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಚಿವ ಜಮೀರ್ ಅಹ್ಮದ್ ಆಪ್ತ ಮಾಜಿಎಂಎಲ್ ಸಿ ಎಂ.ಸಿ. ವೇಣುಗೋಪಾಲ್ ಮನೆ ಮೇಲೆ ದಾಳಿ ನಡೆಸಲಾಗಿದೆ.
ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ಜೆ.ಪಿ. ನಗರದ ಎಂ.ಸಿ. ವೇಣುಗೋಪಾಲ್ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಎಂ.ಸಿ. ವೇಣುಗೋಪಾಲ್ ಮನೆಗೆ ಎರಡು ಕಾರುಗಳಲ್ಲಿ ಬಂದಿರುವ ಐಟಿ ಇಲಾಖೆಯ ೧೫ ಅಧಿಕಾರಿಗಳ ತಂಡವು ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.