ಹುಬ್ಬಳ್ಳಿ : ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಆರೋಪ ಕೇಳಿ ಬಂದಿರುವ ಪ್ರಜ್ವಲ್ ರೇವಣ್ಣರನ್ನು ವಿದೇಶಕ್ಕೆ ಕಳಿಸಿದ್ದು ಸಿಎಂ ಸಿದ್ದರಾಮಯ್ಯ ಎಂದು ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ನೇರ ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣರನ್ನು ವಿದೇಶಕ್ಕೆ ಕಳಿಸಿದ್ದು ಸಿಎಂ ಸಿದ್ದರಾಮಯ್ಯ, ಇದರಲ್ಲೇ ಅವರ ಗೇಮ್ ಗೊತ್ತಾಗುತ್ತದೆ. ಪ್ರಜ್ವಲ್ ರೇವಣ್ಣರನ್ನು ವಿದೇಶಕ್ಕೆ ಕಳಿಸಿ ಈಗ ಡ್ರಾಮಾ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಪ್ರಜ್ವಲ್ ರೇವಣ್ಣರನ್ನು ವಿದೇಶಕ್ಕೆ ಕಳಿಸ ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಅವರು ಪತ್ರ ಬರೆಯುತ್ತಾರೆ. ಇದು ನನ್ನ ನೇರವಾದ ಆರೋಪ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.