ಬೆಂಗಳೂರು : ರಾಜ್ಯದಲ್ಲಿ ಸದ್ಯ ಭಾರೀ ಸದ್ದು ಮಾಡುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಸಂತ್ರಸ್ತ ಮಹಿಳೆ ಎಸ್ ಐಟಿ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ.
ಇಂದು ಬೆಂಗಳೂರಿನ ಎಸ್ ಐಟಿ ಕಚೇರಿಗೆ ಆಗಮಿಸಿದ ಸಂತ್ರಸ್ತ ಮಹಿಳೆಯನ್ನು ಎಸ್ ಐಟಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದು, ಮಹತ್ವದ ಮಾಹಿತಯನ್ನು ಪಡೆದುಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಈ ನಡುವೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣಗೆ ಅವರಿಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.ಇದನ್ನೂ ವಿಮಾನ ನಿಲ್ದಾಣದ ಇಮಿಗ್ರೇಷನ್ ಲುಕೌಟ್ ನೋಟಿಸ್ ಸರ್ವ್ ಮಾಡಲಾಗಿದೆ. ಎಲ್ಲಾ ವಿಮಾನ ನಿಲ್ದಾಣದ ಇಮಿಗ್ರೇಷನ್‍ಗೆ ಎಸ್‍ಐಟಿ ಅಧಿಕಾರಿಗಳು ಲುಕೌಟ್ ನೋಟಿಸ್ ನೀಡಿದೆ ಎನ್ನಲಾಗಿದ್ದು, ಈ ಮೂಲಕ ಲೊಕೇಟ್ ಆದ ಕೂಡಲೇ ವಶಕ್ಕೆ ಪಡೆಯಲು ಸೂಚನೆ ನೀಡಲಾಗಿದೆ ಅಂತ ತಿಳಿದು ಬಂದಿದೆ