ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಕೇಸ್ ಬೆಳಕಿಗೆ ಬರುತ್ತಿದ್ದಂತೆ, ಕರ್ನಾಟಕದಿಂದ ಜರ್ಮನಿಗೆ ಹಾರಿದ್ದರು. ಅಲ್ಲಿಂದ ನಾಳೆ ಬೆಂಗಳೂರಿಗೆ ಎಸ್ಐಟಿ ಅಧಿಕಾರಿಗಳ ಮುಂದೆ ಹಾಜರಾಗೋದಕ್ಕೆ ಬರಲಿದ್ದಾರೆ ಎನ್ನಲಾಗುತ್ತಿತ್ತು. ಆದ್ರೇ ಎಸ್ಐಟಿ ತನಿಖೆ ದಾರಿ ತಪ್ಪಿಸಲು, ದಿನ ದೂಡಲು ಜರ್ಮನಿಯಿಂದ ಈಗ ದುಬೈಗೆ ಹಾರಿದ್ದಾರೆ ಎನ್ನಲಾಗುತ್ತಿದೆ.
ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನದ ಬಳಿಕ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಗೆ ತೆರಳಿದ್ದರು. ಅವರ ಅಶ್ಲೀಲ ವೀಡಿಯೋ ಕೇಸ್ ಬೆಳಕಿಗೆ ಬರುತ್ತಿದ್ದಂತೇ, ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ಆದೇಶಿಸಿತ್ತು. ನಿನ್ನೆಯಷ್ಟೇ ಎಸ್ಐಟಿ ತನಿಖಾಧಿಕಾರಿಗಳಿಗೆ ವಕೀಲರ ಮೂಲಕ 7 ದಿನ ಕಾಲಾವಕಾಶ ನೀಡುವಂತೆ ಪ್ರಜ್ವಲ್ ರೇವಣ್ಣ ಕೋರಿದ್ದರು.
ಈ ಬೆನ್ನಲ್ಲೇ ಜರ್ಮನಿಯಿಂದ ಪ್ರಜ್ವಲ್ ರೇವಣ್ಣ ಬುಧವಾರ ರಾತ್ರಿಯೇ ದುಬೈಗೆ ಹಾರಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಅಲ್ಲದೇ ದುಬೈನಿಂದ ಬೆಂಗಳೂರಿಗೆ ಶೀಘ್ರವೇ ಪ್ರಜ್ವಲ್ ರೇವಣ್ಣ ಬರೋದು ಡೌಟ್, ಎಸ್ಐಟಿ ತನಿಖೆಯನ್ನು ವಿಳಂಬ ಮಾಡೋ ತಂತ್ರಗಾರಿಕೆ ಅನುಸರಿಸುತ್ತಿದ್ದಾರೆ ಎನ್ನಲಾಗುತ್ತಿದೆ.
ಮತ್ತೊಂದೆ ಸಿಎಂ ಸಿದ್ಧರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು, ಪ್ರಜ್ವಲ್ ರೇವಣ್ಣ ಅವರು ರಾಜತಾಂತ್ರಿಕ ಪಾಸ್ ಪೋರ್ಟ್ ಬಳಸಿ ಜರ್ಮನಿಗೆ ತೆರಳಿದ್ದಾರೆ. ಅವರ ಪಾಸ್ ಪೋರ್ಟ್ ಕೂಡಲೇ ರದ್ದುಪಡಿಸಬೇಕು. ಅವರ ವಿರುದ್ಧದ ತನಿಖೆಗೆ ಸಹಕರಿಸಬೇಕು ಎಂಬುದಾಗಿ ಮನವಿ ಮಾಡಿದ್ದಾರೆ.
ಕ್ಯಾನ್ಸರ್ ಪ್ರಕರಣಗಳಿಗೆ 648 ಕೋಟಿ ಪರಿಹಾರ ನೀಡಲು `ಜಾನ್ಸನ್ & ಜಾನ್ಸನ್’ ಅಂಗಸಂಸ್ಥೆ ನಿರ್ಧಾರ