ಮೈಸೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಂಕಷ್ಟದಲ್ಲಿರುವ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ವಿಡಿಯೋದಲ್ಲಿ ಇರುವ ಸಂತ್ರತೆ ಮಹಿಳೆಯನ್ನು ಅಪಹರಿಸಲಾಗಿದೆ ಎಂದು ಮಹಿಳೆಯ ಮಗ ನೀಡಿದ ದೂರಿನ ಮೇರೆಗೆ ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ FIR ದಾಖಲಾಗಿದೆ.
ಕೆ ಆರ್ ನಗರ ಠಾಣೆಯ ಪೊಲೀಸರು ಇದೀಗ ಅಂತ ಮಹಿಳೆಯ ಮಗನ ಆ ದೂರನ್ನು ದಾಖಲಿಸಿಕೊಂಡು ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ವಿರುದ್ಧ FIR ದಾಖಲಿಸಿಕೊಂಡಿದ್ದಾರೆ. ಹಾಗಾಗಿ ಇದೇ ವೇಳೆ ಸಂತ್ರಸ್ತೆ ಮಹಿಳೆಯ ಸಂಬಂಧಿಕರನ್ನು ಠಾಣೆಗೆ ಕರೆದುಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಅಪಹರಣಕ್ಕೆ ಒಳಗದ ಮಹಿಳೆಯು ಎಚ್ ಡಿ ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದಳು ಎಂದು ಹೇಳಲಾಗುತ್ತಿದೆ. ಇದೀಗ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ಡಿ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 364/A 365 ಹಾಗೂ 34 ಅಡಿಯಲ್ಲಿ ಮೈಸೂರಿನ ಕೆ ಆರ್ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.