ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಈಗಾಗಲೇ ಜಾಮೀನಿಗಾಗಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ನಿನ್ನೆಯಷ್ಟೇ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಇಂದಿಗೆ ಕೋರ್ಟ್ ಮುಂದೂಡಿಕೆ ಮಾಡಿತ್ತು. ಈಗ ಬಂಧನದ ಭೀತಿಯನ್ನು ಎದುರಿಸುತ್ತಿರುವಂತ ಅವರು, ಮತ್ತೆ ಕೋರ್ಟ್ ಗೆ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಸಂಬಂಧ ಇಂದು ಕೆಆರ್ ನಗರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿತ್ತು. ಈ ದೂರಿನ ಸಂಬಂಧ ಪ್ರಜ್ವಲ್ ರೇವಣ್ಣ ಹಾಗೂ ಹೆಚ್.ಡಿ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಇಂದು ಎಸ್ಐಟಿ ವಿಚಾರಣೆಗೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಹಾಜರಾಗಬೇಕಿತ್ತು. ಆದ್ರೇ ಕೊನೆಯ ಗಳಿಗೆಯಲ್ಲಿ ಮತ್ತೊಂದು ದೂರು, ಆ ಬಳಿಕ ಎಫ್ಐಆರ್ ದಾಖಲಾಗುತ್ತಿದ್ದಂತೆ, ವಿಚಾರಣೆಯಿಂದ ಹಿಂದೆ ಸರಿದು, ಗೈರಾಗಿದ್ದಾರೆ.
ನೇರವಾಗಿ ಕೋರ್ಟ್ ಗೆ ಹಾಜರಾಗಿ ನಿರೀಕ್ಷಣಾ ಜಾಮೀನು ನಿರೀಕ್ಷೆಯಲ್ಲಿದ್ದಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರು, ಅದು ಸಿಗೋದು ಡೌಟ್ ಎಂಬುದಾಗಿ ಅರಿತು, ಇಂದು ಮತ್ತೆ ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಕೋರಿ ಮತ್ತೊಂದು ಅರ್ಜಿಯನ್ನು ಸಲ್ಲಿಸಿರೋದಾಗಿ ತಿಳಿದು ಬಂದಿದೆ.
ನೇಹಾ ಹಿರೇಮಠ್ ಕೊಲೆ ಪ್ರಕರಣವನ್ನು ‘CBI’ ಗೆ ವಹಿಸಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗ್ರಹ
BREAKING : ಲೋಕಸಭಾ ಚುನಾವಣೆ : ರಾಯ್ ಬರೇಲಿ ಕ್ಷೇತ್ರದಿಂದ ‘ರಾಹುಲ್ ಗಾಂಧಿ’ ನಾಮಪತ್ರ ಸಲ್ಲಿಕೆ