ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಸಿಡಿಲಿಗೆ ಮೂವರು ಸಾವನ್ನಪ್ಪಿದ್ದಾರೆ.
ಬೆಂಗಳೂರು, ದಕ್ಷಿಣ ಕನ್ನಡ, ಸೇರಿ ಹಲವು ಜಿಲ್ಲೆಗಳಲ್ಲಿ ಶುಕ್ರವಾರ ಮಳೆಯಾಗಿದ್ದು, ದಕ್ಷಿಣ ಕನ್ನಡದ ಸುಬ್ರಹ್ಮಣ್ಯ ಗ್ರಾಮದಲ್ಲಿ ಸೋಮಸುಂದರ್ (34) ಎಂಬುವರು ಸಿಡಿಲಿಗೆ ಬಲಿಯಾಗಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕುರಿ ಮೇಯಿಸಲು ತೆರಳಿದ್ದ ರತ್ನಮ್ಮ (55) ಎಂಬುವರು ಸಿಡಿಲಿಗೆ ಬಲಿಯಾಗಿದ್ದಾರೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬೆಟ್ಟಗೇರಿಯಲ್ಲಿ ಸಿಡಿಲಿಗೆ ಪ್ರಮಾತ್ ಗುರ್ಮಾನಿ ಎಂಬುವರು ಮೃತಪಟ್ಟಿದ್ದಾರೆ.