ಕೊಪ್ಪಳ :ರಾಜ್ಯದಲ್ಲಿ ಕಾಂಗ್ರೆಸ್ ಮುಖಂಡರು ದೀಪ ಆರುವಾಗ ಉರಿಯುವ ರೀತಿ ಹಾರಾಡುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಪರ ಪ್ರಚಾರದ ಬಳಿಕ ಮಾತನಾಡಿದರು.
ಪಟ್ಟಣದ ಎಪಿಎಂಸಿಯಿಂದ ಪಟ್ಟಣ ಪಂಚಾಯಿತಿವರೆಗೆ ರೋಡ್ಶೋ ಮಾಡಿದ್ದು, ರೋಡ್ಶೋನಲ್ಲಿ ಶಾಸಕ ಜನಾರ್ದನರೆಡ್ಡಿ, ಎಂಎಲ್ಸಿ ಹೇಮಲತಾ ಭಾಗಿ ಆಗಿದ್ದರು. ರೋಡ್ಶೋ ಬಳಿ ಮಾತನಾಡಿದ ಬಿ.ವೈ.ವಿಜಯೇಂದ್ರ, ಬಿಜೆಪಿಗೆ ವೋಟ್ ಹಾಕುವ ಮೂಲಕ ಕನ್ನಡ & ಸಂಸ್ಕೃತಿ ಸಚಿವ ತಂಗಡಗಿಗೆ ಕಪಾಳಕ್ಕೆ ಹೊಡೆದಂತಾಗಬೇಕು ಎಂದು ವಾಗ್ದಾಳಿ ಮಾಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ದೀಪ ಆರುವಾಗ ಉರಿಯುವ ರೀತಿ ಕಾಂಗ್ರೆಸ್ನವರು ಹಾರಾಡುತ್ತಿದ್ದಾರೆ. ಜೂನ್ 4ರ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ಆಟ ನಡೆಯುವುದಿಲ್ಲ. ಬಿಜೆಪಿಯಲ್ಲಿ ಟಿಕೆಟ್ ಸಿಕ್ಕಿಲ್ಲ ಅಂತಾ ಕೆಲವರು ಪಕ್ಷ ಬಿಟ್ಟು ಹೋಗಿದ್ದಾರೆ. ಅವರಿಗೂ ತಕ್ಕ ಉತ್ತರ ನೀಡಬೇಕಾಗಿದೆ ಎಂದು ಕಿಡಿಕಾರಿದ್ದಾರೆ.