ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ಇಂದು ಪ್ರಜ್ವಲ್ ರೇವಣ್ಣಗೆ ರೆಡ್ ಕಾರ್ನರ್ ನೋಟಿಸ್ ನೀಡುವ ಸಾಧ್ಯತೆ ಇದೆ.
ಪ್ರಜ್ವಲ್ ರೇವಣ್ಣಗೆ ಈಗಾಗಲೇ ಎಸ್ ಐಟಿ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಆದರೆ ಪ್ರಜ್ವಲ್ ರೇವಣ್ಣ ಅವರು ವಿಚಾರಣೆಗೆ ಹಾಜರಾಗಿಲ್ಲ. ಬಂಧನದ ಭೀತಿಯಿಂದ ಪ್ರಜ್ವಲ್ ರೇವಣ್ಣ ವಾಪಸ್ ಆಗೋದು ಅನುಮಾನ ಎನ್ನಲಾಗಿದೆ.
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ರಾಜತಾಂತ್ರಿಕ ಪಾಸ್ ಪೋರ್ಟ್ ಮೂಲಕ ಹೋಗಿದ್ದು, ಹೀಗಾಗಿ ವೀಸಾದ ಅಗತ್ಯತ್ಯೆ ಇಲ್ಲ. ಎಸ್ ಐಟಿ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಿ, ಅವರಿದ್ದಲ್ಲಿಗೆ ಹೋಗಿ ಬಂಧಿಸಲು ಸಿದ್ಧತೆ ನಡೆಸಿದೆ ಎಂದು ಹೇಳಲಾಗಿದೆ.