ಹುಬ್ಬಳ್ಳಿ : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯೇಂದ್ರಗೆ ಮೊದಲೇ ಪತ್ರ ಬರೆದಿದ್ದರು ಅಂತ ಹೇಳುತ್ತಿದ್ದಾರೆ ಆದರೆ ನನಗಂತೂ ಇದುವರೆಗೂ ಯಾವುದೇ ರೀತಿಯಾದಂತಹ ಪತ್ರ ಬಂದಿಲ್ಲ ಈ ಕ್ಷಣದವರೆಗೂ ನನಗೆ ಯಾವುದೇ ಪತ್ರ ಬಂದಿಲ್ಲ ಬಹಳ ಜವಾಬ್ದಾರಿಯಿಂದ ಈ ಮಾತು ಹೇಳುತ್ತಿದ್ದೇನೆ.
ರಾಜ್ಯ ಸರ್ಕಾರಕ್ಕೆ ಗ್ಯಾರಂಟಿ ಬಗ್ಗೆ ವಿಶ್ವಾಸ ಹೋಗಿದೆ. ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ಕೇರಳ ಮಾದರಿಯಲ್ಲಿ ನಮ್ಮ ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಶುರುವಾಗಿದೆ ಎಂದು ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಭೀಮ ವಿಜಯೇಂದ್ರ ವಾಗ್ದಾಳಿ ನಡೆಸಿದರು.