ಬೆಂಗಳೂರು : ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಕಳೆದ ಕೆಲವು ದಿನಗಳಿಂದ ವರುಣ ಕೃಪೆ ತೋರಿದ್ದು ರಾಜ್ಯದ ಹಲವು ಕಡೆಗಳಲ್ಲಿ ಈಗಾಗಲೇ ಮಳೆರಾಯ ಆರ್ಭಟಿಸಿದ್ದಾನೇ. ಅದೇ ರೀತಿಯಾಗಿ ಮೇ 8 ರಿಂದ ರಾಜ್ಯದ ಕೆಲವು ಭಾಗಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅದೇ ರೀತಿಯಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಬಿಸಿಗಾಳಿ ಮುಂದುವರೆಯಲಿದ್ದು ಈಗಾಗಲೇ ಕಲ್ಯಾಣ ಕರ್ನಾಟಕ ಭಾಗದ ಕಲಬುರ್ಗಿ ಯಾದಗಿರಿ ಸೇರಿದಂತೆ ಈ ಭಾಗದಲ್ಲಿ ಅತ್ಯಧಿಕ 46 ಡಿಗ್ರಿ ಸೆಲ್ಸಿ ಎಸ್ ತಾಪಮಾನ ದಾಖಲಾಗಿದೆ. ಅದೇ ರೀತಿಯಾಗಿ ಇನ್ನೂ ನಾಲ್ಕು ದಿನ ಕೊಪ್ಪಳ, ಬೀದರ್, ವಿಜಯಪುರ,ಬೆಳಗಾವಿ, ಧಾರವಾಡ, ಚಿತ್ರದುರ್ಗ, ಬಾಗಲಕೋಟೆ, ಹಾವೇರಿ,ಮಂಡ್ಯ, ರಾಮನಗರ, ಶಿವಮೊಗ್ಗ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಮುಂತಾದ ಜಿಲ್ಲೆಗಳಲ್ಲಿ ನಾಲ್ಕು ಜನಗಳ ಕಾಲ ಬಿಸಿ ಗಾಳಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಮೇ 8 ರಿಂದ 10ರವರೆಗೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಲ್ಲಿ ಮೇ 8 ರಿಂದ ಮೇ 10ರವರೆಗೆ ಬಿರುಸಾಗಿ ಮಳೆ ಬೀಳುವ ಸಾಧ್ಯತೆ ಇದೆ. ಇನ್ನು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮೇ 9ರಿಂದ ಮುಂದಿನ ಎರಡು ದಿನ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ.