ಬೆಂಗಳೂರು : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಇಂದು ಎಸ್ ಐಟಿ ಅಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಸಿದ್ದಾರೆ.
ಬೆಂಗಳೂರಿನ ತಮ್ಮ ಅಧಿಕೃತ ಕಾವೇರಿ ನಿವಾಸದಲ್ಲಿ ಎಸ್ ಐಟಿ ಅಧಿಕಾರಿಗಳು, ಪೊಲಿಸ್ ಅಧಿಕಾರಿಗಳ ಜೊತೆಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದು, ಪೆನ್ ಡ್ರೈವ್ ರಾಸಲೀಲೆ ಪ್ರಕರಣದ ತನಿಖೆ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.
ಇಂದು ದಾವಣಗೆರೆ ಪ್ರವಾಸ ಕೈಗೊಂಡಿರುವ ಸಿಎಂ ಸಿದ್ದರಾಮಯ್ಯ ಕೆಲ ಕಾಲ ಪ್ರವಾಸ ಮುಂದೂಡಿಕೆ ಮಾಡಿ, ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಎಸ್ ಐಟಿ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದು, ಮುಂದಿನ ತನಿಖೆ ಹಾಗೂ ಕಾನೂನಾತ್ಮಕ ಪ್ರಕ್ರಿಯೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.