ನವದೆಹಲಿ: ಆಮ್ ಆದ್ಮಿ ಪಕ್ಷದೊಂದಿಗಿನ ಕಾಂಗ್ರೆಸ್ ಮೈತ್ರಿಯನ್ನು ವಿರೋಧಿಸಿ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಅರವಿಂದರ್ ಸಿಂಗ್ ಲವ್ಲಿ ಶನಿವಾರ ಬಿಜೆಪಿಗೆ ಸೇರಿದ್ದಾರೆ.
ಕಳೆದ ವಾರ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ, ಈಶಾನ್ಯ ದೆಹಲಿಯಿಂದ ಕನ್ಹಯ್ಯ ಕುಮಾರ್ ಮತ್ತು ವಾಯುವ್ಯ ದೆಹಲಿಯಿಂದ ಉದಿತ್ ರಾಜ್ ಅವರ ಉಮೇದುವಾರಿಕೆಯನ್ನು ಲವ್ಲಿ ಟೀಕಿಸಿದ್ದರು. ಅವರು ಡೆಲ್ಹು ಕಾಂಗ್ರೆಸ್’ಗೆ ಸಂಪೂರ್ಣವಾಗಿ ಅಪರಿಚಿತರು ಎಂದು ಅವರು ಹೇಳಿದರು. ತಮ್ಮ ರಾಜೀನಾಮೆ ಟಿಕೆಟ್’ಗಾಗಿ ಅಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನು “ಟಿಕೆಟ್ ಹಂಚಿಕೆ ವಿಚಾರದಲ್ಲಿ ನಾನು ಅಸಮಾಧಾನಗೊಂಡಿದ್ದೇನೆ ಎಂದು ಕೆಲವರು ತಪ್ಪು ಮಾಹಿತಿ ಹರಡುತ್ತಿದ್ದಾರೆ. ಅದು ಹಾಗಲ್ಲ. ಮೂರು ದಿನಗಳ ಹಿಂದೆ ಪತ್ರಿಕಾಗೋಷ್ಠಿ ನಡೆಸುವ ಮೂಲಕ ನಾನು ಅಭ್ಯರ್ಥಿಗಳನ್ನು ಪರಿಚಯಿಸಿದ್ದೇನೆ ಎಂದು ನಿಮಗೆಲ್ಲರಿಗೂ ತಿಳಿದಿದೆ” ಎಂದು ಲವ್ಲಿ ರಾಜೀನಾಮೆ ನೀಡಿದ ನಂತರ ಹೇಳಿದರು, “ನಾನು ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದೇನೆ ಮತ್ತು ನಾನು ಯಾವುದೇ ರಾಜಕೀಯ ಪಕ್ಷಕ್ಕೆ ಸೇರುತ್ತಿಲ್ಲ” ಎಂದು ಈ ಹಿಂದೆ ಹೇಳಿದ್ದರು.
ಶಾಲಾ ಆರಂಭಕ್ಕೂ ಮುನ್ನವೇ ವಿದ್ಯಾರ್ಥಿಗಳಿಗೆ ‘ಪಠ್ಯಪುಸ್ತಕ ವಿತರಣೆ’ಗೆ ಬಗ್ಗೆ ಗುಡ್ ನ್ಯೂಸ್