ಬೆಂಗಳೂರು: ರಾಜ್ಯ ಸರ್ಕಾರದಿದಂ 2024ನೇ ಸಾಲಿನ ಮುಂಗಾರು, ಪೂರ್ವ ಮುಂಗಾರು ಮಳೆ ಅವಧಿಯ ಪೂರ್ವ ಸಿದ್ಧತೆ ಕುರಿತು ಸಲಹೆ ಸೂಚನೆಗಳನ್ನು ಪ್ರಕಟಿಸಲಾಗಿದೆ.
ಇಂದು ರಾಜ್ಯ ಸರ್ಕಾರದಿಂದ ಸುತ್ತೋಲೆಯನ್ನು ಹೊರಡಿಸಲಾಗಿದೆ. ಅದರಲ್ಲಿ ಏಪ್ರಿಲ್.15, 2024ರಂದು ಭಾರತೀಯ ಹವಾಮಾನ ಇಲಾಖೆಯು ಹೊರಡಿಸಿರ ನೈರುತ್ಯ ಮಾನ್ಸೂನ್-2024ರ ಮೊದಲ ಹಂತದ ಕಾರ್ಯಾಚರಣೆಯ ದೀರ್ಘ ವ್ಯಾಪ್ತಿಯ ಮುನ್ಸೂಚನೆಯ ಪ್ರಕಾರಣ ಒಟ್ಟಾರೆಯಾಗಿ ದೇಶಾದ್ಯಂತ ಮಳೆಯು ಸಾಮಾನ್ಯಕ್ಕಿಂತ ಹೆಚ್ಚಾಗಿ ಇರುತ್ತದೆ ಎಂದಿದೆ ಎಂದು ತಿಳಿಸಿದೆ.
ಮಾನ್ಸೂನ್ ಮನೆ ದೀರ್ಘಾವಧಿ ಸರಾಸರಿಯು ಶೇ.104ಕ್ಕಿಂತ ಹೆಚ್ಚು ಇದೆ. ಪ್ರಾದೇಶಿಕ ವಿತರಣೆಯು ಕರ್ನಾಟಕ ಸೇರಿದಂತೆ ಭಾರತದ ಪರ್ಯಾಯ ಪ್ರೇದಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯ ಸಾಧ್ಯತೆಯನ್ನು ಸೂಚಿಸುತ್ತದೆ ಎಂದಿದೆ.
ಮುಂಗಾರು ಅವಧಿಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಉಂಟಾದಲ್ಲಿ ಸಂಭವಿಸಬಹುದಾದ ದುಷ್ಪರಿಣಾಮಗಳನ್ನು ಸಮರ್ಥವಾಗಿ ಎದುರಿಸಲು ಹಾಗೂ ಹಾನಿಯನ್ನು ತಗ್ಗಿಸಲು ಮುಂಗಾರು ಪೂರ್ವದಲ್ಲಿ ಪೂರ್ವ ಸಿದ್ಧತೆ, ಸನ್ನದ್ದತೆ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಹೀಗಾಗಿ ಕೆಲ ಸಲಹೆ ಸೂಚನೆಗಳನ್ನು ಹೊರಡಿಸಿದೆ. ಆ ಸಲೆಹೆ ಸೂಚನೆಗಳು ಈ ಕೆಳಗಿನ ಆದೇಶದಲ್ಲಿದೆ ಓದಿ.
3ನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಅಲ್ಪಸಂಖ್ಯಾತರನ್ನು ಮುಗಿಸ್ತಾರೆ: ಜಮೀರ್ ಅಹ್ಮದ್ ವಿವಾದಾತ್ಮಕ ಹೇಳಿಕೆ