ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಮಾಹಿತಿ ಆಯೋಗದ ಹಂಗಾಮಿ ಮುಖ್ಯ ಮಾಹಿತಿ ಆಯುಕ್ತರಾಗಿ ಡಾ.ಹೆಚ್.ಸಿ ಸತ್ಯನ್ ಅವರನ್ನು ನೇಮಿಸಿ ಆದೇಶಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದ್ದು, ಕರ್ನಾಟಕ ಮಾಹಿತಿ ಹಕ್ಕು ನಿಯಮಗಳು, 2005 ರ ನಿಯಮ 12 ಎ ಅಡಿಯಲ್ಲಿ, ಕರ್ನಾಟಕ ರಾಜ್ಯಪಾಲ ಐ.ಥಾವರ್ ಚಂದ್ ಗೆಹ್ಲೋಟ್ ಅವರು 06.05.2024 ರಿಂದ ಜಾರಿಗೆ ಬರುವಂತೆ ಹೊಸ ರಾಜ್ಯ ಮುಖ್ಯ ಮಾಹಿತಿ ಆಯುಕ್ತರನ್ನು ನೇಮಕ ಮಾಡುವವರೆಗೆ ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮುಖ್ಯ ಮಾಹಿತಿ ಆಯುಕ್ತರ ಹುದ್ದೆಯ ಉಸ್ತುವಾರಿ ರಾಜ್ಯ ಮಾಹಿತಿ ಆಯುಕ್ತ ಡಾ.ಎಚ್.ಸಿ.ಸತ್ಯನ್ ಅವರನ್ನು ನೇಮಕ ಮಾಡಲಾಗಿದೆ ಎಂದಿದೆ.
ರಾಜ್ಯ ಸರ್ಕಾರದಿಂದ 2024ನೇ ಸಾಲಿನ ಮುಂಗಾರು, ಪೂರ್ವ ಮುಂಗಾರು ಮಳೆ ಸಿದ್ಧತೆಗೆ ಈ ಸಲಹೆ, ಸೂಚನೆ ಪ್ರಕಟ