ಬೆಂಗಳೂರು: ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಬಂಧಿಸಲಾಗಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನ ಎಸ್ಐಟಿ ಕಚೇರಿಯ ಬಳಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಬೆಂಗಳೂರಿನ ಕಾರ್ಲಟನ್ ಭವದಲ್ಲಿರುವಂತ ಸಿಐಡಿಯ ಎಸ್ಐಟಿ ಕಚೇರಿಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಬಂಧನದ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಕಾರ್ಲಟನ್ ಭವನದ ಬಳಿಯಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಬ್ಯಾರಿಕೇಡ್ ಅನ್ನು ಪೊಲೀಸರು ಹಾಕಿದ್ದಾರೆ. ಓರ್ವ ಎಸಿಪಿ, ಇಬ್ಬರು ಇನ್ಸ್ ಪೆಕ್ಟರ್, ಐವರು ಪಿಎಸ್ಐ ಸೇರಿದಂತೆ 50ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕೆ ಎಸ್ ಆರ್ ಪಿ ತುಕಡಿಯನ್ನು ಕರೆಸಿಕೊಳ್ಳಲಾಗಿದೆ.