ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಜೆಡಿಎಸ್ ಪಕ್ಷದಿಂದ ಅಮಾತನತುಗೊಳಿಸಲಾಗಿತ್ತು. ಈಗ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದಂತ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಹಿನ್ನಲೆಯಲ್ಲಿ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತುಗೊಳಿಸೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಅವರನ್ನು ಕಿಡ್ನಾಪ್ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಬಂದಿಸಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ನಂತ್ರ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು.
ಈ ಬೆನ್ನಲ್ಲೇ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯುತ್ತಿದೆ. ಸಿಎಸ್ ಪುಟ್ಟರಾಜು, ಟಿ.ಎ ಶರವಣ ಸೇರಿದಂತೆ ವಿವಿಧ ಜೆಡಿಎಸ್ ಮುಖಂಡರು ಭಾಗಿಯಾಗಿದ್ದಾರೆ.
ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಅವರ ಬಂಧನದ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಮುಂದಿನ ನಡೆಯ ಬಗ್ಗೆಯೂ ಚರ್ಚೆ ನಡೆಸಲಾಗುತ್ತಿದ್ದು, ಈ ಜೆಡಿಎಸ್ ಕೋರ್ ಕಮಿಟಿ ಸಭೆಯ ಬಳಿಕ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು, ಪಕ್ಷದಿಂದ ಅಮಾನತುಗೊಳಿಸೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆ ಬಗ್ಗೆ ಕಾದು ನೋಡಬೇಕಿದೆ.
ಪ್ರಜ್ವಲ್ ರೇವಣ್ಣ ಸರಣಿ ಅತ್ಯಾಚಾರ ಪ್ರಕರಣದ ನೊಂದ ಮಹಿಳೆಯರ ಬೆಂಬಲಕ್ಕೆ ನಿಂತ ಆಮ್ ಆದ್ಮಿ ಪಾರ್ಟಿ