ಗದಗ/ಬೆಳಗಾವಿ: ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದೆ. ಅವರಿಗೆ ಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಅವರನ್ನು ವಶಕ್ಕೆ ಪಡೆದಿತ್ತು. ಹಾಗಾದ್ರೇ ಈ ಬಗ್ಗೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಏನು ಹೇಳಿದ್ರು ಅಂತ ಮುಂದೆ ಓದಿ.
ಬೆಳಗಾವಿಯ ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಿಎಂ ಸಿದ್ಧರಾಮಯ್ಯ ಅವರು, ಹೆಚ್.ಡಿ ರೇವಣ್ಣ ಬಂಧನ ಪ್ರಕರಣದಲ್ಲಿ ನಾನು ಮಧ್ಯಪ್ರವೇಶಿಸುವುದಿಲ್ಲ. ಈ ಪ್ರಕರಣದಲ್ಲಿ ಕಾನೂನು ರೀತಿ ಕ್ರಮ ತೆಗೆದುಕೊಳ್ಳಬೇಕು ಎಂದರು.
ಇದೇ ವೇಳೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರು ನೇರವಾಗಿ ಕೋರ್ಟ್ ಗೆ ಹಾಜರಾಗುತ್ತಾರೆ ಎಂಬ ಸಿಎಸ್ ಪುಟ್ಟರಾಜು ಮಾತಿಗೆ ಪ್ರತಿಕ್ರಿಯಿಸಿದಂತ ಅವರು, ಸಿಎಸ್ ಪುಟ್ಟರಾಜು ಏನು ಲಾಯಾರಾ ಎಂದು ಸಿಎಂ ಸಿದ್ಧರಾಮಯ್ಯ ಪ್ರಶ್ನಿಸಿದರು.
ಇನ್ನೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಗದಗದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಬಂಧನದ ಬಗ್ಗೆ ಪ್ರತಿಕ್ರಿಯಿಸಿ, ನ್ಯಾಯಾಲಯ ಉಂಟು, ಕಾನೂನು ಉಂಟು. ನಾವು ಯಾವುದಕ್ಕೂ ಭಾಗಿಯಾಗಲ್ಲ. ನಮಗೆ ಅವಶ್ಯಕತೆಯೂ ಇಲ್ಲ ಎಂದರು.
ಕೋರ್ಟ್, ಕಾನೂನು ಮೂಲಕ ಏನಾದ್ರೂ ರಕ್ಷಣೆ ಪಡೆದುಕೊಳ್ಳಲಿ. ಅವರು ಏನಾದ್ರೂ ಮಾಡಿಕೊಳ್ಳಲಿ. ಕುಮಾರಸ್ವಾಮಿ ಏನು ಹೇಳಿದ್ದಾರೆ ಹಾಗೆ ಆಗುತ್ತೆ ಎಂಬುದಾಗಿ ಹೇಳುವ ಮೂಲಕ ಉಪ್ಪ ತಿಂದವರು ನೀರು ಕುಡಿಯಲೇಬೇಕು ಹೇಳಿಕೆಯನ್ನು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೆನಪಿಸಿದರು.
ಗೂಗಲ್ ಪ್ಲೇ ಸ್ಟೋರ್’ನಲ್ಲಿ ‘ನಕಲಿ ಅಪ್ಲಿಕೇಶನ್’ ಗುರುತಿಸೋದು ಈಗ ಮತ್ತಷ್ಟು ಸುಲಭ