ಬೆಂಗಳೂರು: ಮೇ.7ರಂದು ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ 2ನೇ ಹಂತದಲ್ಲಿ ಮತದಾನ ನಡೆಯಲಿದೆ. 2ನೇ ಹಂತದ ವ್ಯಾಪ್ತಿಯ ಮತದಾರರು ಮತ ಚಲಾಯಿಸಲು ಅನುಕೂಲ ಆಗುವಂತೆ ಅಂದು ವೇತನ ಸಹಿತ ರಜೆಯನ್ನು ರಾಜ್ಯ ಸರ್ಕಾರ ಘೋಷಿಸಿದೆ.
ಮೇ 07 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಕಚೇರಿ, ಶಾಲಾ ಕಾಲೇಜು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಎಲ್ಲಾ ವ್ಯವಹಾರ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಸಂವಿಧಾನಾತ್ಮಕ ಅಥವಾ ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಎಲ್ಲಾ ವ್ಯವಹಾರ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು, ಹಾಗೂ ಇತರ ಸಂಸ್ಥೆಗಳು ಮತದಾನ ದಿನದಂದು ನೌಕರರಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ.
ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಗುಣವಾಗುವಂತೆ ಸಂಬಂಧಿಸಿದ ಇಲಾಖೆ ಹಾಗೂ ಸಂಘ ಸಂಸ್ಥೆಗಳು ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ.
ಈ ಜಿಲ್ಲೆಗಳಲ್ಲಿ ರಜೆ ಘೋಷಣೆ
ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗಾ, ರಾಯಚೂರು, ಬೀದರ್, ಕೊಪ್ಪಳ. ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ.