ಬೆಂಗಳೂರು: ವಿದೇಶದಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣನವರು ಇಂದು ಮಧ್ಯಾಹ್ನ 3 ಗಂಟೆಗೆ ದುಬೈನಿಂದ ಬೆಂಗಳೂರಿಗೆ ಆಗಮಿಸಲಿದ್ದು, ಎಸ್ ಐಟಿ ಅಧಿಕಾರಿಗಳ ಮುಂದೆ ಶರಣಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಒಂದು ವೇಳೆ ಪ್ರಜ್ಚಲ್ ರೇವಣ್ಣ ಭಾರತಕ್ಕೆ ಆಗಮಿಸದೇ ಹೋದರೆ ಸಿಬಿಐ ನೇರವಿನೊಂದಿಗೆ ರಾಜ್ಯದ ಪೊಲೀಸರು ಅವರು ಇರುವ ಜಾಗಕ್ಕೆ ಹೋಗಿ ಅವರನ್ನು ತಮ್ಮ ವಶಕ್ಕೆಪಡೆದುಕೊಂಡು ರಾಜ್ಯಕ್ಕೆ ಬರಲಿದ್ದಾರೆ ಎಂದು ಹೇಳಲಾಗುತ್ತಿದೆ.
ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಡಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ನ್ಯಾಯಾಲಯ ಜಾಮೀನು ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ಬೆಂಗಳೂರಿನ ಪದ್ಮನಾಭನಗರ ನಿವಾಸದಲ್ಲಿ ರೇವಣ್ಣರನ್ನು ಬಂಧಿಸಿದ್ದು ತಮ್ಮ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಇಂದು ನ್ಯಾಯಾಧೀಶರ ಮುಂದೆ ಅವರನ್ನು ಹಾಜರು ಪಡಿಸಲಿದ್ದಾರೆ ಎನ್ನಲಾಗಿದೆ.
ಇನ್ನು, ಪ್ರಜ್ವಲ್ ರೇವಣ್ಣ ಕೂಡ ಆಗಮಿಸಲಿದ್ದಾರೆ. ಅವರು ಪೊಲೀಸರಿಗೆ ಶರಣಾಗಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಎಸ್ ಐಟಿ ಅಧಿಕಾರಿಗಳು ತೆರಳಿದ್ದಾರೆ.