ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಆ ಬಳಿಕ ಅವರು ವಿದೇಶಕ್ಕೆ ಪರಾರಿಯಾಗಿದ್ದರು. ಇಂತಹ ಅವರು ಇಂದು ಸಂಜೆ 6.30ಕ್ಕೆ ದುಬೈನಿಂದ ಬೆಂಗಳೂರಿಗೆ ಬರಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹಾರಿದ್ದರು. ಬೆಂಗಳೂರಿನಿಂದ ದುಬೈಗೆ ತೆರಳಿದ್ದರು. ಅವರು ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ವಜಾಗೊಂಡ ನಂತ್ರ, ಅವರಿಗೆ ಸಂಕಷ್ಟ ಎದುರಾಗಿತ್ತು. ಅಲ್ಲದೇ ಕುಟುಂಬಸ್ಥರು ಬೇಲ್ ಸಿಗೋದು ಬಿಡೋದು ನೋಡೋಣ, ಮೊದಲು ನೀನು ಬೆಂಗಳೂರಿಗೆ ಬಾ ಎಂಬುದಾಗಿ ಸೂಚಿಸಿದ್ದರು ಎನ್ನಲಾಗಿದೆ.
ಈ ಹಿನ್ನಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರು ದುಬೈನಿಂದ ಬೆಂಗಳೂರಿಗೆ ಸಂಜೆ 6.30ಕ್ಕೆ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಅವರು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ, ಅವರನ್ನು ಬಂಧಿಸೋದಕ್ಕೆ ಪೊಲೀಸರು ಕಾಯುತ್ತಿದ್ದಾರೆ. ಪೊಲೀಸರು ಪ್ರಜ್ವಲ್ ರೇವಣ್ಣ ಅವರನ್ನು ವಶಕ್ಕೆ ಪಡೆದ ನಂತ್ರ, ಎಸ್ಐಟಿ ಅಧಿಕಾರಿಗಳಿಗೆ ಮಾಹಿತಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
‘ವುಹಾನ್’ ಲ್ಯಾಬ್ನಿಂದ ಕೋವಿಡ್ ಸೋರಿಕೆಯಾಗುವ ಸಾಧ್ಯತೆ ಹೆಚ್ಚು: ಯುಕೆಗೆ ಅಮೆರಿಕ ಎಚ್ಚರಿಕೆ
BREAKING: ನಾಳೆ CBSE, ICSE 10, 12ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟ