ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳಿಂದ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಬಂಧಿಸಲಾಗಿದೆ. ಈ ಬಳಿಕ ಅವರನ್ನು ವಿಚಾರಣೆಗೆ ಇಂದು ಒಳಪಡಿಸಿದಾಗ ಏನು ಹೇಳಿದ್ರು ಅಂತ ಮುಂದೆ ಓದಿ.
ನಿನ್ನೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ನಿನ್ನೆ ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಬಂಧಿಸಿದ ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ನಂತ್ರ, ಇಂದು ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.
ಎಸ್ಐಟಿ ಅಧಿಕಾರಿಗಳು ಕೇಳಿದಂತ ಪ್ರಶ್ನೆಗಳಿಗೆ ಸೂಕ್ತ ರೀತಿಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರು ಉತ್ತರಿಸಿಲ್ಲ ಎನ್ನಲಾಗುತ್ತಿದೆ. ಎಸ್ಐಟಿ ಅಧಿಕಾರಿಗಳು ಸಂತ್ರಸ್ತೆಯ ಬಗ್ಗೆ ಕೇಳಿದಂತ ಪ್ರಶ್ನೆಗಳಿಗೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರು, ಸಂತ್ರಸ್ತೆಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ನಮ್ಮ ಮನೆಯಲ್ಲಿ ಸಾಕಷ್ಟು ಜನ ಕೆಲಸ ಮಾಡುತ್ತಿದ್ದಾರೆ ಎಂದಿದ್ದಾರೆ ಎನ್ನಲಾಗುತ್ತಿದೆ.
ಸಂತ್ರಸ್ತೆಯ ಮಗನ ಹೇಳಿಕೆಯನ್ನು ಹೇಗೆ ನಂಬಲು ಸಾಧ್ಯ? ನಾನೇ ಕರೆದುಕೊಂಡು ಬರಲು ಹೇಳಿದ್ದೇನೆಂದು ಸಾಕ್ಷಿ ಏನಿದೆ ಎಂಬುದಾಗಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರು ಎಸ್ಐಟಿ ಅಧಿಕಾರಿಗಳಿಗೆ ಪ್ರಶ್ನಿಸಿರೋದಾಗಿ ಹೇಳಲಾಗುತ್ತಿದೆ.
ಇದಲ್ಲದೇ ಸಂತ್ರಸ್ತೆ ಜೊತೆ ನಾನು ಮಾತಾಡಿಲ್ಲ. ನೋಡಿಯೂ ಇಲ್ಲ. ರೇವಣ್ಣ ಎಂಬ ಹೆಸರಿನವರು ನಾನು ಒಬ್ಬನೇ ಇರೋದಾ? ನನ್ನ ಹೆಸರಿನವರು ಬೇರೆಯವರೂ ಇರಬಹುದು ಅಲ್ವ? ನನಗೆ ಏನೂ ಗೊತ್ತಿಲ್ಲ ಎಂಬುದಾಗಿ ಅಪಹರಣ ಪ್ರಕರಣದಲ್ಲಿ ಹೆಚ್.ಡಿ ರೇವಣ್ಣ ಎಸ್ಐಟಿ ಅಧಿಕಾರಿಗಳು ಕೇಳಿದಂತ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಿಲ್ಲ ಎನ್ನಲಾಗುತ್ತಿದೆ.
BREAKING: ನಾಳೆ CBSE, ICSE 10, 12ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟ
‘ಹೆಚ್.ಡಿ.ರೇವಣ್ಣ ಬಂಧನ’ದ ಬಗ್ಗೆ ಶಾಕಿಂಗ್ ರಿಯಾಕ್ಷನ್ ಕೊಟ್ಟ ‘ಕಾಂಗ್ರೆಸ್ ಶಾಸಕ ರವಿ ಗಣಿಗ’