ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ಅವರು ಯಾವುದೇ ಸಮಯದಲ್ಲಿ ರಾಜ್ಯಕ್ಕೆ ಆಗಮಿಸುವ ಸಾಧ್ಯತೆ ಇದೆ.
ವಿದೇಶದಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣನವರು ಇಂದು ದುಬೈನಿಂದ ಬೆಂಗಳೂರಿಗೆ ಆಗಮಿಸಲಿದ್ದು, ಎಸ್ ಐಟಿ ಅಧಿಕಾರಿಗಳ ಮುಂದೆ ಶರಣಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಒಂದು ವೇಳೆ ಪ್ರಜ್ಚಲ್ ರೇವಣ್ಣ ಭಾರತಕ್ಕೆ ಆಗಮಿಸದೇ ಹೋದರೆ ಸಿಬಿಐ ನೇರವಿನೊಂದಿಗೆ ರಾಜ್ಯದ ಪೊಲೀಸರು ಅವರು ಇರುವ ಜಾಗಕ್ಕೆ ಹೋಗಿ ಅವರನ್ನು ತಮ್ಮ ವಶಕ್ಕೆಪಡೆದುಕೊಂಡು ರಾಜ್ಯಕ್ಕೆ ಬರಲಿದ್ದಾರೆ ಎಂದು ಹೇಳಲಾಗುತ್ತಿದೆ.
ಪ್ರಜ್ವಲ್ ವಿರುದ್ಧ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಸ್ಥಳೀಯ ಸಂಸ್ಥೆಗಳ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಎಫ್ ಐಆರ್ ದಾಖಲಾಗಿದೆ.