ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಲೈಂಗಿಕ ದೌರ್ಜನ್ಯದ ವಿಡಿಯೋಗಳಲ್ಲಿ ಮೂವರು ಮಹಿಳಾ ಸರ್ಕಾರಿ ನೌಕರರು ಇರುವುದನ್ನು ಎಸ್ ಐಟಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
ಎಸ್ ಐಟಿ ಅಧಿಕಾರಿಗಳು ಈಗಾಗಲೇ ಸಿಕ್ಕಿರುವ ಪೆನ್ ಡ್ರೈವ್ ನಲ್ಲಿ ಲೈಂಗಿಕ ದೌರ್ಜನ್ಯದ ವಿಡಿಯೋಗಳು ಹಾಗೂ ಅಶ್ಲೀಲ ಫೋಟೋಗಳ ಪರಿಶೀಲನೆ ವೇಳೆ ಮೂವರು ಮಹಿಳಾ ಸರ್ಕಾರಿ ನೌಕರರ ಗುರುತು ಪತ್ತೆಯಾಗಿದೆ. ಈ ಮೂವರು ಸಂತ್ರಸ್ತೆಯರನ್ನು ಎಸ್ ಐಟಿ ಅಧಿಕಾರಿಗಳು ಸಂಪರ್ಕಿಸಿದ್ದು, ದೂರು ನೀಡುವಂತೆ ಸೂಚಿಸಿದ್ದಾರೆ.
ಇನ್ನು ಎಸ್ ಐಟಿ ಅಧಿಕಾರಿಗಳು ಅಶ್ಲೀಲ ವಿಡಿಯೋಗಳು ಹಾಗೂ ಫೋಟೋದಲ್ಲಿರುವ ಮಹಿಳೆಯರನ್ನು ಗುರುತಿಸಿ, ದೂರು ನೀಡುವಂತೆ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ವರದಿಯಾಗಿದೆ.
ವಿದೇಶದಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣನವರು ಇಂದು ದುಬೈನಿಂದ ಬೆಂಗಳೂರಿಗೆ ಆಗಮಿಸಲಿದ್ದು, ಎಸ್ ಐಟಿ ಅಧಿಕಾರಿಗಳ ಮುಂದೆ ಶರಣಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಒಂದು ವೇಳೆ ಪ್ರಜ್ಚಲ್ ರೇವಣ್ಣ ಭಾರತಕ್ಕೆ ಆಗಮಿಸದೇ ಹೋದರೆ ಸಿಬಿಐ ನೇರವಿನೊಂದಿಗೆ ರಾಜ್ಯದ ಪೊಲೀಸರು ಅವರು ಇರುವ ಜಾಗಕ್ಕೆ ಹೋಗಿ ಅವರನ್ನು ತಮ್ಮ ವಶಕ್ಕೆಪಡೆದುಕೊಂಡು ರಾಜ್ಯಕ್ಕೆ ಬರಲಿದ್ದಾರೆ ಎಂದು ಹೇಳಲಾಗುತ್ತಿದೆ.