ಸೊರಬ : ಲೋಕಸಭೆ ಚುನಾವಣೆ ಬಳಿಕ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.
ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಆರ್ಥಿಕವಾಗಿ ದಿವಾಳಿಯಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಲೋಕಸಭೆ ಚುನಾವಣೆ ನಂತರ ಪತನಗೊಳ್ಳಲಿದೆ. ಕೇಂದ್ರ ಸರ್ಕಾರ ಜಾರಿಗೆ ತಂದ ಕಿಸಾನ್ ಸಮ್ಮಾಣ್ ಯೋಜನೆ ಸೇರಿ ತಮ್ಮ ಅಧಿಕಾರವಧಿಯಲ್ಲಿ ರೂಪಿಸಿದ ಭಾಗ್ಯಲಕ್ಷ್ಮೀ ಯೋಜನೆ ಸ್ಥಗಿತಗೊಳಿಸಿದ್ದಾರೆ ಎಂದು ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ಟೋಪಿ ಹಾಕುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಖಜಾನೆ ಖಾಲಿಯಾಗಿರುವುದರಿಂದ ರಾಜ್ಯದಲ್ಲಿ ಯಾವುದೆ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.