ಬೆಂಗಳೂರು : ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಯಾವುದೇ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡರೆ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧವಾಗುತ್ತದೆ ಎಂದು ಎಸ್ ಐಟಿ ಅಧಿಕಾರಿಗಳು ತಿಳಿಸಿದ್ದಾರೆ.
ಸಾಮಾಝಿಕ ಜಾಲತಾಣದಲ್ಲಿ ಹಾಸನದ ಅಶ್ಲೀಲ ವಿಡಿಯೋ ಹಂಚಿಕೊಂಡರೆ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧವಾಗುತ್ತದೆ. ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಯಾವುದೇ ಸಂತ್ರಸ್ತರ ಗುರುತನ್ನು ಬಹಿರಂಗಪಡಿಸುವ ಕೆಲಸವನ್ನು ಮಾಧ್ಯಮ ಸಂಸ್ಥೆಗಳಳು, ವ್ಯಕ್ತಿಗಳು ಅಥವಾ ಸಂಘ ಸಂಸ್ಥೆಗಳು ಅಥವಾ ಇನ್ಯಾರೇ ಆದರೂ ಮಾಡದಂತೆ ಸೂಚಿಸಲಾಗಿದೆ.