ಮಂಡ್ಯ : ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಭ್ರೂಣಲಿಂಗ ಪತ್ತೆ ಪ್ರಕರಣದ ಬೆನ್ನಲ್ಲೇ ಇದೀಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಆರೋಗ್ಯ ಇಲಾಖೆಯ ಕ್ವಾಟರ್ಸ್ ನಲ್ಲಿಯೇ ಭ್ರೂಣಲಿಂಗ ಪತ್ತೆಯಾಗಿದೆ.
ಹೌದು,ಮಂಡ್ಯ ಜಿಲ್ಲೆಯ ಪಾಂಡವಪುರ ಆರೋಗ್ಯ ಇಲಾಖೆ ಕ್ವಾಟರ್ಸ್ ನಲ್ಲಿ ಭ್ರೂಣಲಿಂಗ ಪತ್ತೆಯಾಗಿದ್ದು, ಖಚಿತ ಮಾಹಿತಿ ಮೇರೆಗೆ ಡಿಹೆಚ್‌ಒ ಡಾ.ಮೋಹನ್, ಟಿಹೆಚ್‌ಒ ಡಾ.ಅರವಿಂದ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ದಾಳಿ ವೇಳೆ ಗರ್ಭಪಾತಕ್ಕೆ ಬಂದಿದ್ದ ಮೈಸೂರು ಮೂಲದ ಮಹಿಳೆಯನ್ನು ರಕ್ಷಿಸಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರನ್ನು ವಶಕ್ಕೆ ಪಡೆಯಲಾಗಿದೆ.
ಪ್ರಕರಣ ಸಂಬಂಧ ಆನಂದ್, ಅಶ್ವಿನಿ ಹಾಗೂ ಮತ್ತೋರ್ವ ಮಹಿಳೆಯನ್ನು ವಶಕ್ಕೆ ಪಡೆಯಲಾಗಿದ್ದು, ಆನಂದ್ ಪಾಂಡವಪುರ ತಾಲೂಕು ಆಸ್ಪತ್ರೆಯ ಆಂಬುಲೆನ್ಸ್ ಚಾಲಕನಾಗಿದ್ದಾನೆ. ಅಶ್ವಿನಿ ತಾಲೂಕು ಆಸ್ಪತ್ರೆಯಲ್ಲಿ ಹೊರಗುತ್ತಿಗೆಆಧಾರದಲ್ಲಿ ಡಿ ಗ್ರೂಪ್ ಸಿಬ್ಬಂದಿ. ಚಾಲಕ ಆನಂದ್ ಗೆ ನಿಗದಿಯಾಗಿದ್ದ ಸರ್ಕಾರಿ ನಿವಾಸದಲ್ಲಿಯೇ ಕೃತ್ಯವೆಸಗಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಪಾಂಡವಪುರ ಪೂಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.