ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಬೆಂಗಳೂರಿನ ಬಸವನಗುಡಿಯಲ್ಲಿರುವ ಹೆಚ್.ಡಿ ರೇವಣ್ಣ ಅವರ ನಿವಾಸದಲ್ಲಿ ಎಸ್ ಐಟಿ ಅಧಿಕಾರಿಗಳು ಸ್ಥಳ ಮಹಜರು ನಡೆಸುತ್ತಿದ್ದಾರೆ.
ಬಸವನಗುಡಿಯಲ್ಲಿರುವ ಹೆಚ್. ಡಿ. ರೇವಣ್ಣ ಅವರ ನಿವಾಸಕ್ಕೆ ಎಸ್ ಐಟಿ ಅಧಿಕಾರಿಗಳು ಐದು ವಾಹನಗಳಲ್ಲಿ ಆಗಮಿಸಿದ್ದು, ಸ್ಥಳ ಮಹಜರು ನಡೆಸುತ್ತಿದ್ದಾರೆ.
ಸಂತ್ರಸ್ತ ಮಹಿಳೆಯನ್ನೂ ಜೊತೆಗೆ ಕರೆದುಕೊಂಡು ಬಂದಿರುವ ಎಸ್ ಐಟಿ ಅಧಿಕಾರಿಗಳು ಹೆಚ್.ಡಿ ರೇವಣ್ಣ ನಿವಾಸದಲ್ಲಿ ಸ್ಥಳ ಮಹಜನರು ನಡೆಸುತ್ತಿದ್ದಾರೆ. ಎಸ್ ಐಟಿ ಅಧಿಕಾರಿಗಳಿಗೆ ಪೊಲೀಸರು ಸಾಥ್ ನೀಡಿದ್ದಾರೆ. ನಿವಾಸಕ್ಕೆ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.