ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ಇಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಪ್ರಕರಣದ ಬಗ್ಗೆ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಎಸ್ ಐಟಿ ಅಧಿಕಾರಿಗಳು, ಅಶ್ಲೀಲ ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣ ಕುರಿತು ಮಾಹಿತಿ ನೀಡಿದ್ದಾರೆ. ರಾಜ್ಯಕ್ಕೆ ಇನ್ನೂ ಆಗಮಿಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತು ಚರ್ಚೆ ನಡೆಸಿದ್ದಾರೆ.
ಗುಪ್ತಚರ ಇಲಾಖೆ ಮುಖ್ಯಸ್ಥ ಶರತ್ ಚಂದ್ರ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ರೇವಣ್ಣ ಬಂಧನದ ಕೇಸ್ ಬೆಳವಣಿಗೆ ಕುರಿತು ಮಾಹಿತಿ ನೀಡಿದ್ದಾರೆ.