ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಶಾಸಕ ಎಚ್ಡಿ ರೇವಣ್ಣ ಇದೀಗ ಮತ್ತೆ ಕೋರ್ಟ್ ಮೊರೆ ಹೋಗಿದ್ದು, ಜಾಮೀನಿಗಾಗಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮತ್ತೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ
ಹೌದು ಈ ಮೊದಲು ಅಂದರೆ ಎಸ್ಐಟಿ ಬಂಧನಕ್ಕೂ ಮುನ್ನ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಇದನ್ನು ಕೋರ್ಟ್ ತಿರಸ್ಕರಿಸಿದ್ದು, ಇದೀಗ ಹೆಚ್ ಡಿ ರೇವಣ್ಣ ಮತ್ತೆ ಜಾಮೀನು ಕೋರಿ ಬೆಂಗಳೂರಿನ ವಿಶೇಷ ನ್ಯಾಯ ಇಲಾಖೆ ಅರ್ಜಿ ಸಲ್ಲಿಸಿದ್ದಾರೆ.
ಹೌದು ಜಾಮೀನು ಕೋರಿ ಮತ್ತೆ ಕೋರ್ಟ್ ಮೆಟ್ಟಿಲೇರಿದ್ದು, ಎಚ್ ಡಿ ರೇವಣ್ಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟಿಗೆ ರೇವಣ್ಣ ಇದೀಗ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆ ಬಂಧನ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮುಕ್ತಾಯಗೊಳಿಸಿತ್ತು. ಈಗ ಎಚ್ ಡಿ ರೇವಣ್ಣ ಮತ್ತೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.