Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಶಿವರಾತ್ರಿ ಜಾಗರಣೆಗೆ ಹೋಗಿದ್ದವರಮನೆಗೆ ಮನೆಯಲ್ಲಿ ದರೋಡೆ : 154 ಗ್ರಾಂ ಚಿನ್ನ, 270 ಗ್ರಾಂ ಬೆಳ್ಳಿ ಕಳ್ಳತನ!

16/02/2026 9:59 AM

JOB ALERT : ಪರೀಕ್ಷೆಗಳಿಲ್ಲದೆ ಆಧಾರ್ ಕೇಂದ್ರಗಳಲ್ಲಿ 252 ಹುದ್ದೆಗಳ ನೇಮಕಾತಿ : `ITI, 10, 12 ತರಗತಿ ಪಾಸಾದವರಿಗೆ ಅವಕಾಶ

16/02/2026 9:49 AM

ಬಸ್ಸನ್ನು ಕಂಡುಹಿಡಿದವರು ಯಾರು? ಆ ಮೂರು ಅಕ್ಷರಗಳ ಹಿಂದಿನ ರಹಸ್ಯವೇನು ಗೊತ್ತಾ?

16/02/2026 9:29 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಡಿನ ‘ಮಹಿಳೆ’ಯರಿಗೆ ‘ಭಾವನಾತ್ಮಕ ಪತ್ರ’ ಬರೆದ ‘ಸಿಎಂ ಸಿದ್ಧರಾಮಯ್ಯ’: ಇಲ್ಲಿದೆ ಓದಿ | CM Siddaramaiah
KARNATAKA

ನಾಡಿನ ‘ಮಹಿಳೆ’ಯರಿಗೆ ‘ಭಾವನಾತ್ಮಕ ಪತ್ರ’ ಬರೆದ ‘ಸಿಎಂ ಸಿದ್ಧರಾಮಯ್ಯ’: ಇಲ್ಲಿದೆ ಓದಿ | CM Siddaramaiah

By kannadanewsnow0906/05/2024 5:24 PM

ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಾಡಿನ ಮಹಿಳೆಯರಿಗೆ ಭಾವನಾತ್ಮಕ ಪತ್ರ ಬರೆದಿದ್ದಾರೆ. ಹಾಗಾದ್ರೇ ಏನು ಬರೆದಿದ್ದಾರೆ ಅಂತ ಮುಂದೆ ಓದಿ.

ನನ್ನ ಪ್ರೀತಿಯ ತಾಯಂದಿರೇ ಮತ್ತು ಅಕ್ಕ-ತಂಗಿಯರೇ,

ಹದಿನೆಂಟನೇ ಲೋಕಸಭಾ ಚುನಾವಣೆಯಲ್ಲಿ ನಿರ್ಧಾರವಾಗಲಿರುವುದು ರಾಜಕೀಯ ಪಕ್ಷಗಳ ಸೋಲು-ಗೆಲುವುಗಳು ಮಾತ್ರ ಅಲ್ಲ, ಈ ಚುನಾವಣೆ ಮಹಿಳೆಯರ ಪರವಾದ ಸರ್ಕಾರದ ಕಾರ್ಯಕ್ರಮಗಳ ಸೋಲು-ಗೆಲುವನ್ನು ಕೂಡಾ ನಿರ್ಧರಿಸಲಿದೆ. ‘‘ಮಹಿಳೆಯರು ಸ್ವಾತಂತ್ರ್ಯಕ್ಕೆ ಅರ್ಹರಲ್ಲ’’ ಎಂದು ಖಡಾಖಂಡಿತವಾಗಿ ಸಾರಿದ ಮನುಶಾಸ್ತ್ರವನ್ನು ನಂಬಿರುವ ಭಾರತೀಯ ಜನತಾ ಪಕ್ಷ ಮತ್ತು ಮಹಿಳೆಯರಿಗೆ ಸಮಾನ ಅವಕಾಶ ಮತ್ತು ಸ್ಥಾನಮಾನ ನೀಡಬೇಕೆಂದು ಸಾರಿದ ಸಂವಿಧಾನಕ್ಕೆ ಬದ್ಧವಾಗಿರುವ ಕಾಂಗ್ರೆಸ್ ಪಕ್ಷಗಳ ನಡುವೆ ಇಂದಿನ ಮಹಿಳೆಯರು ಆಯ್ಕೆ ಮಾಡಬೇಕಾಗಿದೆ ಎಂದಿದ್ದಾರೆ.

ಭಾರತೀಯ ಜನತಾ ಪಕ್ಷ ಮತ್ತು ಅದರ ಮಾತೃಸಂಸ್ಥೆಯಾದ ಆರ್ ಎಸ್ ಎಸ್ ನ ಸಿದ್ಧಾಂತ ಮತ್ತು ನಡವಳಿಕೆ ಸ್ಪಷ್ಟವಾಗಿ ಮಹಿಳಾ ವಿರೋಧಿಯಾದುದು. ಗುಜರಾತ್ ನಿಂದ ಮಣಿಪುರದ ವರೆಗೆ ಇದಕ್ಕೆ ನಿದರ್ಶನಗಳನ್ನು ಕಾಣಬಹುದು. ಕರ್ನಾಟಕದಲ್ಲಿ ಸ್ತ್ರೀಪೀಡಕರ ಜೊತೆಗೆ ಬಿಜೆಪಿ ಕೈಜೋಡಿಸಿರುವುದು ಇತ್ತೀಚಿನ ಉದಾಹರಣೆ. ಕಾಯಾ ವಾಚಾ ಮನಸಾ ಬಿಜೆಪಿ ಮಹಿಳಾ ವಿರೋಧಿ ಪಕ್ಷ ಎಂದು ತಿಳಿಸಿದ್ದಾರೆ.

ನಮ್ಮ ಸರ್ಕಾರ ‘‘ಗೃಹಲಕ್ಷ್ಮಿ’’ ಮತ್ತು ‘‘ಶಕ್ತಿ’’ ಯೋಜನೆಗಳನ್ನು ಶುರುಮಾಡಿದ ದಿನದಿಂದಲೂ ಬಿಜೆಪಿ ನಾಯಕರು ಇದರ ವಿರುದ್ದ ಅಪಪ್ರಚಾರದ ಆಂದೋಲವನ್ನು ಪ್ರಾರಂಭಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಖಜಾನೆ ಖಾಲಿಯಾಗುತ್ತಿದೆ ಎಂದು ಕೆಲವರು ಆರೋಪಿಸಿದರೆ ಇನ್ನು ಕೆಲವರು ಇನ್ನೂ ಮುಂದಕ್ಕೆ ಹೋಗಿ ಈ ರೀತಿಯ ನೆರವು ನೀಡಿದರೆ ಹೆಣ್ಣುಮಕ್ಕಳು ಮನೆಬಿಟ್ಟು ಹಾದಿ ತಪ್ಪುತ್ತಾರೆ ಎಂದು ತೀರಾ ಕ್ಷುಲ್ಲಕತನದ ಆರೋಪ ಮಾಡಿದ್ದಾರೆ ಎಂದಿದ್ದಾರೆ.

ಬಿಜೆಪಿ ನಾಯಕರ ವಿರೋಧಕ್ಕೆ ಮುಖ್ಯ ಕಾರಣ ಮಹಿಳೆಯರ ಸಬಲೀಕರಣವಾಗಬಾರದೆಂಬ ದುಷ್ಟ ಉದ್ದೇಶ. ಮಹಿಳಾ ಸಬಲೀಕರಣವನ್ನು ಕಾಂಗ್ರೆಸ್ ಪಕ್ಷ ಎಂದೂ ರಾಜಕೀಯ ಕಾರ್ಯಕ್ರಮವಾಗಿ ನೋಡಿಲ್ಲ, ಅದು ನಮ್ಮ ಪಾಲಿಗೆ ಸಾಮಾಜಿಕ ಜವಾಬ್ದಾರಿ. ನಮ್ಮ ಪಕ್ಷ ಮತ್ತು ಸರ್ಕಾರ ಮಹಿಳಾ ಪರವಾಗಿ ನಿಂತಿರುವುದಕ್ಕೆ 2013-18ರ ಅವಧಿಯ ನಮ್ಮ ಹಳೆಯ ಸರ್ಕಾರ ಮತ್ತು ಕಳೆದ ಹತ್ತು ತಿಂಗಳ ಅವಧಿಯ ನಮ್ಮ ಹೊಸ ಸರ್ಕಾರದ ಸಾಧನೆಗಳು ಸಾಕ್ಷಿ ಎಂದು ಹೇಳಿದ್ದಾರೆ.

ಐದು ವರ್ಷಗಳ ನಮ್ಮ ಹಿಂದಿನ ಸರ್ಕಾರದ ಅವಧಿಯಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಸಬಲೀಕರಣಕ್ಕೆ ಆದ್ಯತೆ ನೀಡಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದೆವು. ಸ್ನಾತಕೋತ್ತರ ಪದವಿವರೆಗೆ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ, ಸ್ತ್ರೀ ಶಕ್ತಿ ಸಂಘಗಳ ಆವರ್ತ ನಿಧಿ 5000 ರೂ.ಗಳಿಂದ 25 ಸಾವಿರಕ್ಕೆ ಏರಿಕೆ, ಗರ್ಭಿಣಿ ಮತ್ತು ಬಾಣಂತಿಯರಿಗೆ ಪೌಷ್ಠಿಕ ಆಹಾರ ನೀಡುವ ಮಾತೃಪೂರ್ಣ, ತಾಯಿ ಮತ್ತು ಮಗುವಿಗಾಗಿಯೇ 20 ವಿಶೇಷ ಆಸ್ಪತ್ರೆಗಳ ಪ್ರಾರಂಭ, ಮಹಿಳಾ ಉದ್ಯಮಿಗಳಿಗೆ ಆರು ಪ್ರತ್ಯೇಕ ಕೈಗಾರಿಕಾ ಪಾರ್ಕ್… ಹೀಗೆ ಮಹಿಳೆಯರ ಹಿತವನ್ನೇ ಗುರಿಯಾಗಿಟ್ಟುಕೊಂಡು ಜಾರಿಗೊಳಿಸಿರುವ ಯೋಜನೆಗಳ ಫಲವನ್ನು ನೀವು ಪಡೆದಿದ್ದೀರಿ ಎಂದಿದ್ದಾರೆ.

ನಮ್ಮ ಈಗಿನ ಸರ್ಕಾರದಲ್ಲಿ ಗ್ಯಾರಂಟಿ ಯೋಜನೆಗಳು ಸೇರಿದಂತೆ ಒಟ್ಟು ಯೋಜನೆಗಳಲ್ಲಿ ಮಹಿಳೆಯರ ಅಭಿವೃದ್ದಿಗೆ ಆದ್ಯತೆ ನೀಡಿದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದ 1.21 ಕೋಟಿ ಮನೆ ಯಜಮಾನಿಗೆ ತಿಂಗಳಿಗೆ ರೂ.2000 ಜಮೆ ಆಗುತ್ತಿದೆ. ಶಕ್ತಿ ಯೋಜನೆಯಡಿ ಇಲ್ಲಿಯ ವರೆಗೆ 201 ಕೋಟಿಗೂ ಅಧಿಕ ಬಾರಿ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡಿದ್ದಾರೆ. ಗ್ರಾಮೀಣ ಮಹಿಳೆಯರ ಮಕ್ಕಳ ಪಾಲನೆ ಮತ್ತು ಪೋಷಣೆಗೆ ಅನುಕೂಲವಾಗಲಿ ಎಂಬ ಉದ್ದೇಶದೊಂದಿಗೆ ರಾಜ್ಯದಲ್ಲಿ 4,000 ಕೂಸಿನ ಮನೆಗಳ ಸ್ಥಾಪಿಸಿದ್ದೇವೆ, ಶುಚಿ ಯೋಜನೆಯಡಿ 19,27,355 ಹೆಣ್ಣು ಮಕ್ಕಳಿಗೆ ಸ್ಯಾನಿಟರಿ ಪ್ಯಾಡ್ ನೀಡಿದ್ದೇವೆ. ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ರೂ.86,423 ಕೋಟಿ ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ.

ಇಂದಿರಾಗಾಂಧಿ ಎಂಬ ಉಕ್ಕಿನ ಮಹಿಳೆಯನ್ನು ದೇಶಕ್ಕೆ ಕೊಟ್ಟ ಪಕ್ಷ ಕಾಂಗ್ರೆಸ್. ಅವರು ಪಕ್ಷದ ಅಧ್ಯಕ್ಷೆಯಾಗಿ ಮತ್ತು ದೇಶದ ಪ್ರಧಾನಿಯಾಗಿ ಸುಮಾರು ಮೂರು ದಶಕಗಳ ಕಾಲ ದೇಶಕ್ಕೆ ಮಾಡಿರುವ ಸೇವೆ ಅನುಪಮವಾದುದು. ಪಕ್ಷದ ಸಾರಥ್ಯ ವಹಿಸಿಕೊಂಡ ದಿನದಿಂದ ಸೋನಿಯಾ ಗಾಂಧಿಯವರು ಮಹಿಳೆಯರ ಸಬಲೀಕರಣಕ್ಕಾಗಿ ಪಕ್ಷ ಮತ್ತು ಸರ್ಕಾರದ ಮಟ್ಟದಲ್ಲಿ ಪ್ರಯತ್ನ ನಡೆಸಿದ್ದಾರೆ. ಇವರು ಪ್ರಾರಂಭದಿಂದಲೇ ಮಹಿಳೆಯರ ರಾಜಕೀಯ ಮೀಸಲಾತಿ ಪರ ದನಿ ಎತ್ತುತ್ತಾ ಬಂದಿದ್ದಾರೆ ಎಂದು ಹೇಳಿದ್ದಾರೆ.

ಪಂಚಾಯತ್ ರಾಜ್ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇಕಡಾ 50ರಷ್ಟು ಮೀಸಲಾತಿಯನ್ನು ಕರ್ನಾಟಕದಲ್ಲಿ ಜಾರಿಗೆ ತಂದಿರುವ ಶ್ರೇಯಸ್ಸು ನಮಗೆ ಸಲ್ಲಬೇಕು. ಈಗಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಮ್ಮ ಪಕ್ಷ ಆರು ಮಹಿಳೆಯರಿಗೆ ಅವಕಾಶ ಕಲ್ಪಿಸಿದೆ. ರಾಜ್ಯದ ಮಟ್ಟಿಗೆ ಇದೊಂದು ದಾಖಲೆ. ಪಕ್ಷಭೇದ ಮರೆತು ಇವರನ್ನು ಗೆಲ್ಲಿಸುವ ಮೂಲಕ ಮಹಿಳಾ ಶಕ್ತಿಯ ಪ್ರದರ್ಶನವನ್ನು ಜಗತ್ತಿಗೆ ತೋರಿಸಬೇಕಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಬೇರೆ ರಾಜಕೀಯ ಪಕ್ಷಗಳು ಕೂಡಾ ಮಹಿಳೆಯರಿಗೆ ಅವಕಾಶ ನೀಡಲು ಒತ್ತಡ ಹೇರಿದಂತಾಗುತ್ತದೆ ಎಂದಿದ್ದಾರೆ.

ಸುಮಾರು ಐದು ಸಾವಿರ ವರ್ಷಗಳಿಂದ ನಿರಂತರವಾಗಿ ತಾರತಮ್ಯ, ಶೋಷಣೆ ಮತ್ತು ಅವಕಾಶಗಳ ವಂಚನೆಗೆ ತುತ್ತಾಗಿರುವ ಮಹಿಳೆಯರ ಸಬಲೀಕರಣದ ಕೆಲಸ ದೀರ್ಘಕಾಲೀನವಾದುದು. ಈ ಪ್ರಯತ್ನ ಮುಂದುವರಿದುಕೊಂಡು ಹೋಗಬೇಕಾದರೆ ಮಹಿಳೆಯರು ತಮ್ಮ ಕೈ ಬಲಪಡಿಸುವವರ ಕೈ ಹಿಡಿಯಬೇಕು, ಬೆಂಬಲಿಸಬೇಕು. ಇಂತಹದ್ದೊಂದು ಅವಕಾಶವನ್ನು ಈ ಲೋಕಸಭಾ ಚುನಾವಣೆ ಮಹಿಳೆಯರಿಗೆ ನೀಡಿದೆ. ಈ ಚುನಾವಣೆಯಲ್ಲಿ ನಿಮ್ಮ ಬೆಂಬಲದ ಬಲವನ್ನು ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ನೀಡಿ ಗೆಲ್ಲಿಸಿ. ನಮ್ಮನ್ನು ಹರಸಿ, ಹಾರೈಸಬೇಕೆಂದು ಕೋರುತ್ತೇನೆ. ಕಾಂಗ್ರೆಸ್ ಪಕ್ಷದ ಗೆಲುವಿನಲ್ಲಿಯೇ ಮಹಿಳೆಯರ ಗೆಲುವಿದೆ ಎಂಬುದಾಗಿ ಸಿಎಂ ಸಿದ್ದರಾಮಯ್ಯ ಪತ್ರದಲ್ಲಿ ತಿಳಿಸಿದ್ದಾರೆ.

BREAKING: ‘ಝೀ ಮೀಡಿಯಾ ಕಾರ್ಪೊರೇಷನ್’ ಸಿಇಒ ‘ಅಭಯ್ ಓಜಾ’ ವಜಾ | Abhay Ojha

Teacher Jobs: ‘ಶಿಕ್ಷಕರ ಹುದ್ದೆ’ ಆಕಾಂಕ್ಷಿಗಳೇ ಗಮನಿಸಿ: ಈ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Share. Facebook Twitter LinkedIn WhatsApp Email

Related Posts

BIG NEWS : ಶಿವರಾತ್ರಿ ಜಾಗರಣೆಗೆ ಹೋಗಿದ್ದವರಮನೆಗೆ ಮನೆಯಲ್ಲಿ ದರೋಡೆ : 154 ಗ್ರಾಂ ಚಿನ್ನ, 270 ಗ್ರಾಂ ಬೆಳ್ಳಿ ಕಳ್ಳತನ!

16/02/2026 9:59 AM1 Min Read

JOB ALERT : ಪರೀಕ್ಷೆಗಳಿಲ್ಲದೆ ಆಧಾರ್ ಕೇಂದ್ರಗಳಲ್ಲಿ 252 ಹುದ್ದೆಗಳ ನೇಮಕಾತಿ : `ITI, 10, 12 ತರಗತಿ ಪಾಸಾದವರಿಗೆ ಅವಕಾಶ

16/02/2026 9:49 AM2 Mins Read

ಬಸ್ಸನ್ನು ಕಂಡುಹಿಡಿದವರು ಯಾರು? ಆ ಮೂರು ಅಕ್ಷರಗಳ ಹಿಂದಿನ ರಹಸ್ಯವೇನು ಗೊತ್ತಾ?

16/02/2026 9:29 AM2 Mins Read
Recent News

BIG NEWS : ಶಿವರಾತ್ರಿ ಜಾಗರಣೆಗೆ ಹೋಗಿದ್ದವರಮನೆಗೆ ಮನೆಯಲ್ಲಿ ದರೋಡೆ : 154 ಗ್ರಾಂ ಚಿನ್ನ, 270 ಗ್ರಾಂ ಬೆಳ್ಳಿ ಕಳ್ಳತನ!

16/02/2026 9:59 AM

JOB ALERT : ಪರೀಕ್ಷೆಗಳಿಲ್ಲದೆ ಆಧಾರ್ ಕೇಂದ್ರಗಳಲ್ಲಿ 252 ಹುದ್ದೆಗಳ ನೇಮಕಾತಿ : `ITI, 10, 12 ತರಗತಿ ಪಾಸಾದವರಿಗೆ ಅವಕಾಶ

16/02/2026 9:49 AM

ಬಸ್ಸನ್ನು ಕಂಡುಹಿಡಿದವರು ಯಾರು? ಆ ಮೂರು ಅಕ್ಷರಗಳ ಹಿಂದಿನ ರಹಸ್ಯವೇನು ಗೊತ್ತಾ?

16/02/2026 9:29 AM

ಈ ಸಸ್ಯಕ್ಕಿದೆ 100 ರೋಗಗಳನ್ನು ಗುಣಪಡಿಸುವ ಶಕ್ತಿ ! ಮನೆಯಲ್ಲಿ ತಪ್ಪದೇ ಇಟ್ಟುಕೊಳ್ಳಿ

16/02/2026 9:24 AM
State News
KARNATAKA

BIG NEWS : ಶಿವರಾತ್ರಿ ಜಾಗರಣೆಗೆ ಹೋಗಿದ್ದವರಮನೆಗೆ ಮನೆಯಲ್ಲಿ ದರೋಡೆ : 154 ಗ್ರಾಂ ಚಿನ್ನ, 270 ಗ್ರಾಂ ಬೆಳ್ಳಿ ಕಳ್ಳತನ!

By kannadanewsnow0516/02/2026 9:59 AM KARNATAKA 1 Min Read

ವಿಜಯಪುರ : ಮಹಾಶಿವರಾತ್ರಿ ಜಾಗರಣೆಯನ್ನೇ ಬಂಡವಾಳ ಮಾಡಿಕೊಂಡ ಖದೀಮರು ಶಿವರಾತ್ರಿ ಜಾಗರಣೆಗೆ ಹೋಗಿದ್ದವರ ಮನೆ ಕಳ್ಳತನ ಮಾಡಿರುವ ಘಟನೆ ವಿಜಯಪುರ…

JOB ALERT : ಪರೀಕ್ಷೆಗಳಿಲ್ಲದೆ ಆಧಾರ್ ಕೇಂದ್ರಗಳಲ್ಲಿ 252 ಹುದ್ದೆಗಳ ನೇಮಕಾತಿ : `ITI, 10, 12 ತರಗತಿ ಪಾಸಾದವರಿಗೆ ಅವಕಾಶ

16/02/2026 9:49 AM

ಬಸ್ಸನ್ನು ಕಂಡುಹಿಡಿದವರು ಯಾರು? ಆ ಮೂರು ಅಕ್ಷರಗಳ ಹಿಂದಿನ ರಹಸ್ಯವೇನು ಗೊತ್ತಾ?

16/02/2026 9:29 AM

ಈ ಸಸ್ಯಕ್ಕಿದೆ 100 ರೋಗಗಳನ್ನು ಗುಣಪಡಿಸುವ ಶಕ್ತಿ ! ಮನೆಯಲ್ಲಿ ತಪ್ಪದೇ ಇಟ್ಟುಕೊಳ್ಳಿ

16/02/2026 9:24 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.