ಬೆಳಗಾವಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿ ಇದ್ದರೂ ಕೂಡ, ಆದಾಗ ಅಕ್ರಮವಾಗಿ ಹಣ ಮಧ್ಯ ಸಾಗಾಟ ನಡೆಸುತ್ತಿರುವವರ ಮೇಲೆ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ಕಣ್ಣಿಟ್ಟಿದ್ದಾರೆ. ಹಗರಿ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಹಂಚಿಕೆ ಇಲ್ಲದೆ ಮತದಾರರಿಗೆ ಹಣ ಹಂಚುತ್ತಿದ್ದ ಓರ್ವ ವ್ಯಕ್ತಿಯನ್ನು ಇದೀಗ ಪೊಲೀಸರು ಕೋಶಕ್ಕೆ ಪಡೆದಿದ್ದಾರೆ.
ಹೌದು ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಉಗಾರ ಬಿಕೆ ಗ್ರಾಮದಲ್ಲಿ ಮತದಾರರಿಗೆ ಹಣ ಹಂಚುತ್ತಿದ್ದ. ಘಟನೆಗೆ ಸಂಬಂಧಿಸಿದಂತೆ ಓರ್ವನನ್ನು ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ.
ಆದರೆ ಇನ್ನು ಇಬ್ಬರು ಪರಾರಿ ಆಗಿದ್ದಾರೆ. ಮತದಾರರಿಗೆ ತಲಾ 500 ರೂಪಾಯಿ ಹಂಚುತ್ತಿದ್ದ ಗೋಕಾಕ್ ಮೂಲದ ವ್ಯಕ್ತಿ ಎಂದು ಹೇಳಲಾಗುತ್ತಿದ್ದು 35,000 ನಗದು ಹಾಗೂ ಮತದಾರರ ಪಟ್ಟಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಕುರಿತಂತೆ ಪ್ರಕರಣ ದಾಖಲಾಗಿದ್ದು ವಶಕ್ಕೆ ಪಡೆದಿರುವ ಆರೋಪಿಯನ್ನು ಇದೀಗ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.