ಶಿವಮೊಗ್ಗ : ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಜನರು ಬೆಳಗ್ಗೆಯೇ ಮತಗಟ್ಟೆಗೆ ಆಗಮಿಸಿ ಉತ್ಸಾಹದಿಂದ ಮತದಾನ ಮಾಡುತ್ತಿದ್ದಾರೆ.
ಇಂದು ಬೆಳಗ್ಗೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಕುಟುಂಬಸ್ಥರೊಂದಿಗೆ ಮತದಾನ ಮಾಡಿದ್ದಾರೆ.
ಮತಗಟ್ಟೆಗೆ ಆಗಮಿಸುವುದಕ್ಕೂ ಮೊದಲು ಕುಟುಂಬದೊಂದಿಗೆ ದೇವಾಲಯಕ್ಕೆ ತೆರಳಿದ ಬಿ.ಎಸ್. ಯಡಿಯೂರಪ್ಪ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ್ದಾರೆ.