ಶಿವಮೊಗ್ಗ: ಜಿಲ್ಲೆಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ಅತಿ ಹೆಚ್ಚು ಮತಗಳಿಂದ ಗೆಲ್ಲುತ್ತಾರೆ. ಕಾಂಗ್ರೆಸ್ ಅಭಿವೃದ್ಧಿ ಕಾರ್ಯಗಳೇ ಅವರನ್ನು ಕೈ ಹಿಡಿಯಲಿದೆ. ಮತದಾರರು ಅವರ ಪರವಾಗಿ ಒಲವು ತೋರಿದ್ದಾರೆ. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಗೆಲುವು ಖಚಿತ ಎಂಬುದಾಗಿ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ಇಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಗೋಪಾಲಕೃಷ್ಣ ಬೇಳೂರುರವರು ತಮ್ಮ ಸ್ವಗ್ರಾಮವಾದ ಬೇಳೂರಿನ ಮತಗಟ್ಟೆ ಸಂಖ್ಯೆ-24ರಲ್ಲಿ ಕುಟುಂಬ ಸಮೇತರಾಗಿ ಮತ ಚಲಾಯಿಸಿದರು.
ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಂಗಾರಪ್ಪನವರ ಕುಟುಂಬ, ಶಿವರಾಜ್ ಕುಮಾರ್ ಅವರ ಹೆಂಡತಿ. ಮಹಿಳೆಯರ ಬಗ್ಗೆ ಸಾಗರದಲ್ಲಿ ಒಳ್ಳೆಯ ಅಭಿಪ್ರಾಯವಿದೆ. ಈ ಬಾರಿಯೂ ಸಾಗರದಲ್ಲಿ 16,000ಕ್ಕೂ ಹೆಚ್ಚು ವೋಟ್ ಬರಲಿದೆ. ಯಾರು ಇಲ್ಲ ಅನ್ನೋ ಪದ ಹೇಳುತ್ತಿಲ್ಲ ಎಂದರು.
ಹೌದು ಸಂಸದ ಬಿ.ವೈ ರಾಘವೇಂದ್ರ ಅಭಿೃಮಾಡಿದ್ದಾರೆ. ಅವರ ಮನೆ ಅಭಿವೃದ್ಧಿ ಮಾಡಿಕೊಂಡಿದ್ದಾರೆ. ಬೇಕಾದಷ್ಟು ಆಸ್ತಿ ಮಾಡಿಕೊಂಡಿದ್ದಾರೆ. ಕಾಲೇಜುಗಳನ್ನು ಮಾಡಿಕೊಂಡಿದ್ದಾರೆ. ಜನರಿಗೆ ಅಭಿವೃದ್ಧಿ ಏನು ಮಾಡಿಲ್ಲ. ಸಾಗರ, ಹೊಸನಗರಕ್ಕೆ ಅವರ ಕೊಡುಗೆ ಏನು ಇಲ್ಲ. ತೋರಿಸಲಿ. ಅದು ಕಾಗೋಡು ಮಾತ್ರ ಮಾಡಿರೋದು ಎಂದರು.
ಬಂಗಾರಪ್ಪನವರ ಜಪ್ರಿಯ ಕಾರ್ಯಕ್ರಮ ಮಾಡಿದ್ದಾರೆ. ಅವರ ಜನಪರ ಕಾರ್ಯಗಳೇ ಲೋಕಸಭಾ ಚುನಾವಣೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಕೈ ಹಿಡಿಯಲಿದೆ. ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಗೀತಾ ಶಿವರಾಜ್ ಕುಮಾರ್ ಗೆಲುವು ಶತಸಿದ್ಧ ಎಂಬುದಾಗಿ ತಿಳಿಸಿದರು.
ಲೋಕಸಭೆ ಚುನಾವಣೆ : ರಾಜ್ಯದಲ್ಲಿ ಬಿಜೆಪಿ 25-26 ಸ್ಥಾನಗಳನ್ನು ಗೆಲ್ಲಲಿದೆ : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ